ಬೀದರ್ | ಅಪೂರ್ಣ ಅರ್ಜಿ ಸಲ್ಲಿಸಿದ ಅಂಗನವಾಡಿ ಕಾರ್ಯಕರ್ತೆ ಹುದ್ದೆಯ ಅಭ್ಯರ್ಥಿಗಳಿಂದ ಮರು ಅರ್ಜಿಗೆ ಅವಕಾಶ

ಶ್ರೀನಿವಾಸ್ ಬಾಳವಾಲೆ, ಸಿಡಿಪಿಓ ಭಾಲ್ಕಿ
ಬೀದರ್ : ಭಾಲ್ಕಿ ತಾಲ್ಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಅಪೂರ್ಣ ಅರ್ಜಿಗಳನ್ನು ಪೂರ್ಣಗೊಳಿಸಲು ಮರು ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಶಿಶು ಅಭಿವೃದ್ಧಿ ಅಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾಲ್ಕಿ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 25 ಅಂಗನವಾಡಿ ಕಾರ್ಯಕರ್ತೆ ಹಾಗೂ 65 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಆನಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿತ್ತು. ಹುದ್ದೆಗಳು ಭರ್ತಿ ಮಾಡುವ ಪ್ರಕ್ರಿಯೆಗೆ ಸಂಬಂಧಿಸಿದಂತೆ, ಅರ್ಜಿ ಸಲ್ಲಿಸುವಾಗ 4 ಹಂತಗಳು ಪೂರ್ಣಗೊಳಿಸದೇ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಯ ಅಭ್ಯರ್ಥಿಗಳ ಅರ್ಜಿಗಳು ಅಪೂರ್ಣಗೊಂಡಿದ್ದವು. ಅರ್ಜಿಗಳು ಅಪೂರ್ಣವಾಗಿದ್ದ ಅಭ್ಯರ್ಥಿಗಳಿಂದ ಮರು ಅರ್ಜಿ ಹಾಕಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.
ಮೊದಲು ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಡಿ.26ರಿಂದ ಜ.5ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೈಬ್ ಸೈಟಿನಲ್ಲಿ ಇಲಾಖೆಯ ವತಿಯಿಂದಲೇ ಅವಕಾಶ ನೀಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.







