ಬೀದರ್ | ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಇನ್ನೊಂದು ಲಾರಿ ಢಿಕ್ಕಿ; ಚಾಲಕ ಮೃತ್ಯು

ಬೀದರ್: ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಹಿಂದಿನಿಂದ ಇನ್ನೊಂದು ಲಾರಿ ಬಂದು ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ತಾಡೋಳಾ ಗ್ರಾಮದ ಹತ್ತಿರ ನಡೆದಿದೆ.
ನಿರಗೂಡಿ ಗ್ರಾಮದ ನಿವಾಸಿ ತಿರುಪತಿ ದಾಸರೆ (36) ಮೃತಪಟ್ಟ ಲಾರಿ ಚಾಲಕ.
ನಿನ್ನೆ ರಾತ್ರಿ ಸುಮಾರು 10 ಗಂಟೆಗೆ ತಿರುಪತಿ ಲಾರಿ ಚಲಾಯಿಸಿಕೊಂಡು ಮುಂಬೈ ಕಡೆಯಿಂದ ಹೈದರಾಬಾದ್ ಕಡೆಗೆ ತೆರಳುತ್ತಿದ್ದರು. ಅವರು ಚಲಾಯಿಸುತ್ತಿದ್ದ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದ ಇನ್ನೊಂದು ಲಾರಿಯನ್ನು ಗಮನಿಸದೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಇದರಿಂದ ತಿರುಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅಪಘಾತ ಸಂಭವಿಸಿದ್ದರಿಂದ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಜೆಸಿಬಿ ಮೂಲಕ ಅಪಘಾತಕ್ಕೀಡಾದ ಲಾರಿಗಳನ್ನು ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಈ ಬಗ್ಗೆ ಬಸವಕಲ್ಯಾಣದ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





