ಬೀದರ್ | ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ

ಬೀದರ್ : ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಕ್ರೈಸ್ತ ವಸತಿ ಶಾಲೆಗಳ ಖಾಯಂ ಶಿಕ್ಷಕ ಹಾಗೂ ನೌಕರರು ಹಲವು ಸೌಲಭ್ಯಗಳಿಂದ ವಂಚಿತರಾಗಿದ್ದು, ಅವರ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಂದು ಸಂಸದ ಸಾಗರ್ ಖಂಡ್ರೆ ಅವರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ವಸತಿ ಶಿಕ್ಷಣ ನಿರ್ದೇಶನಾಲಯ ರಚನೆ, ಜ್ಯೋತಿ ಸಂಜೀವಿನಿ ಅನುಷ್ಠಾನ, ಮರಣ ಮತ್ತು ನಿವೃತ್ತಿ ಉಪದಾನ ಸೌಲಭ್ಯ ಒದಗಿಸುವುದು, ಮನೆ ಬಾಡಿಗೆ ಕಡಿತದಿಂದ ವಿನಾಯಿತಿ ನೀಡುವುದು ಹಾಗೂ ಶೇ.10 ವಿಶೇಷ ಭತ್ಯೆ ಮಂಜೂರಾತಿ ಮಾಡುವುದು ಸೇರಿದಂತೆ ಇತರ ಬೇಡಿಕೆಗಳು ಈಡೇರಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ದೇವಿದಾಸ್ ಜೋಷಿ ಅವರು, ಈ ನಮ್ಮ ಬೇಡಿಕೆಗಳು ಈಡೇರುವವರೆಗೆ ವಿವಿಧ ರೂಪದಲ್ಲಿ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಕ್ರೈಸ್ತ ವಸತಿ ಶಾಲೆಗಳ ಪ್ರಾಂಶುಪಾಲರ ಸಂಘದ ರಾಜ್ಯ ಉಪಾಧ್ಯಕ್ಷ ಶರಣಪ್ಪ ಬಿರಾದಾರ್, ಪ್ರಧಾನ ಕಾರ್ಯದರ್ಶಿ ಚನ್ನಬಸವ ಹೆಡೆ, ಪ್ರಾಂಶುಪಾಲ ಸಂಘದ ಜಿಲ್ಲಾಧ್ಯಕ್ಷ ರವೀಂದ್ರ ಚಟ್ನಳ್ಳಿ, ಕಲಬುರಗಿ ವಿಭಾಗೀಯ ಉಪಾಧ್ಯಕ್ಷ ಅನಿಲ್ ಕಾಂಬ್ಳೆ, ಸಂಘಟನಾ ಕಾರ್ಯದರ್ಶಿ ಶ್ರೀಮಂತ್ ಸಪಾಟೆ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರತನರಾಜ್ ವಾಘಮಾರೆ, ಉಪಾಧ್ಯಕ್ಷ ಮಂಜುನಾಥ್ ಮಡಿವಾಳ್ ಹಾಗೂ ಸಹ ಕಾರ್ಯದರ್ಶಿ ನಾರಾಯಣ ಹೊನ್ನಾಳೆ ಸೇರಿದಂತೆ ಸಂಘದ ಇನ್ನಿತರ ಸದಸ್ಯರು ಉಪಸ್ಥಿತರಿದ್ದರು.







