ಬೀದರ್ | ಅಕ್ರಮ ಮದ್ಯ ಮಾರಾಟದ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ

ಬೀದರ್ : ಜಿಲ್ಲೆಯಲ್ಲಿ ಅಕ್ರಮ ಮದ್ಯ ಮತ್ತು ಕಳ್ಳಭಟ್ಟಿ ಸರಾಯಿಯನ್ನು ಕಾನೂನು ಬಾಹಿರವಾಗಿ ಮಾರಾಟ ಮಾಡಲಾಗುತ್ತಿದೆ. ಹಾಗೆಯೇ ವೈನ್‌ಶಾಪ್ ಗಳಲ್ಲಿಯು ಕಾನೂನು ಬಾಹಿರ ಚಟುವಟಿಕೆ ನಡೆಯುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕಾವಲುಪಡೆ) ಜಿಲ್ಲಾಧ್ಯಕ್ಷ ಅವಿನಾಶ್ ಬುಧೇರಾಕರ್ ಮನವಿ ಮಾಡಿದ್ದಾರೆ.
ಉಪ ಅಬಕಾರಿ ಆಯುಕ್ತರಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ವೈನ್‌ಶಾಪ್ ಗಳಲ್ಲಿ ವಿವಿಧ ಬ್ರಾಂಡ್‌ಗಳ ಮದ್ಯಕ್ಕೆ ನಿಗದಿಪಡಿಸಿರುವ ಬೆಲೆಗಿಂತ ಅಧಿಕ ಬೆಲೆ ಪಡೆಯಲಾಗುತ್ತಿದೆ. ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡಿ ಕಾನೂನು ಉಲ್ಲಂಘನೆ ಮಾಡುತ್ತಿದ್ದಾರೆ. ಅಲ್ಲದೇ ಮದ್ಯದ ಬಿಲ್ ಕೂಡ ಪಾವತಿ ಮಾಡುತ್ತಿಲ್ಲ ಎಂದು ದೂರಿದ್ದಾರೆ.
ಕಳ್ಳಭಟ್ಟಿ ಸರಾಯಿ ಮಾರಾಟ ಮಾಡುವ ಹಾಗೂ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿರುವ ಮದ್ಯದಂಗಡಿಯ ಮಾಲಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಗಿದೆ.
Next Story





