ಬೀದರ್ | ಅರ್ಜಿ ಆಹ್ವಾನ

ಬೀದರ್ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪೋಷಣ ಅಭಿಯಾನ ಯೋಜನೆ ಅಡಿ ಹುಮನಾಬಾದ್ ಮತ್ತು ಬಸವಕಲ್ಯಾಣ ತಾಲ್ಲೂಕು ಮಟ್ಟದಲ್ಲಿ 2 ಸಂಯೋಜಕರ ಹುದ್ದೆ ಹಾಗೂ ಮಿಶನ್ ಶಕ್ತಿ ಮಹಿಳಾ ಸಬಲೀಕರಣ ಘಟಕ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಖಾಲಿ ಇರುವ 1 ಲಿಂಗ ತಜ್ಞ (Gender Specialist) ಹುದ್ದೆ ನೇಮಕಾತಿಗಾಗಿ ಅರ್ಹ ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹರು ಮಾ.3 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಮತ್ತು ವೇಳಾಪಟ್ಟಿ ವಿವರಗಳು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮೈಲೂರ ಬೀದರ್ ಅವರಿಂದ ಪಡೆಯಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆ: 77607 05424, 82772 04909 ಗೆ ಸಂಪರ್ಕಿಸಿ ಎಂದು ಅವರು ತಿಳಿಸಿದ್ದಾರೆ.
Next Story





