ಬೀದರ್ | 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ

ಬೀದರ್ : 2025-26ನೇ ಸಾಲಿನ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಜನವಾಡಾ ಶಾಲೆಯಲ್ಲಿ 6ನೇ ತರಗತಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಜನವಾಡಾ ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯ ಶಿಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು ಎಸ್.ಟಿ.ಎಸ್ ನಂಬರ್, ಜಾತಿ ಆದಾಯ ಪ್ರಮಾಣ ಪತ್ರದ ಆರ್.ಡಿ.ಸಂಖ್ಯೆ (ಪ್ರಸ್ತುತ ಚಾಲ್ತಿಯಲ್ಲಿರುವ), ಆಧಾರ ಕಾರ್ಡ್, ಪಾಸ್ ಪೋರ್ಟ್ ಅಳತೆಯ ಫೋಟೋ-1, ವ್ಯಾಸಂಗ ದೃಢೀಕರಣ ಪ್ರಮಾಣ ಪತ್ರ, ವಿಶೇಷ ಮೀಸಲಾತಿ ಪ್ರಮಾಣ ಪತ್ರ (ಅಂಗವಿಕಲರಿಗೆ ಮಾತ್ರ), ಪ್ರಸ್ತುತ ಚಾಲ್ತಿಯಲ್ಲಿರುವ ಪಾಲಕರ ದೂರವಾಣಿ ಸಂಖ್ಯೆ, ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಶಾಲೆಯ ಮುಖ್ಯ ಗುರುಗಳ ಮೊಬೈಲ್ ಸಂಖ್ಯೆ, ವಾಸಸ್ಥಳ ಪ್ರಮಾಣ ಪತ್ರ ಸಲ್ಲಿಸಬೇಕು. ಬೇರೆ ತಾಲ್ಲೂಕು ಹಾಗೂ ಹೊರ ರಾಜ್ಯಗಳಲ್ಲಿ ಕಲಿಯುತ್ತಿರುವ ಬೀದರ್ ತಾಲ್ಲೂಕಿನ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸತಕ್ಕದ್ದು ಎಂದು ಅವರು ಹೇಳಿದ್ದಾರೆ.
ಅರ್ಹ ವಿದ್ಯಾರ್ಥಿಗಳು www.schooleducation.kar.nic,in ಮತ್ತು www.vidyavahini.karnataka.gov.in ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಫೆ.28 ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರವೇಶ ಪರೀಕ್ಷೆಯು ಫೆ.23 ರಂದು ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 99804 96932, 89702 24448 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







