Bidar | ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ್ : ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಪಿಎಂಶ್ರೀ ಜವಾಹರ್ ನವೋದಯ ವಿದ್ಯಾಲಯ 2026- 27ನೇ ಸಾಲಿನ 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲ ನಾಗರಾಜನ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಿದ್ಯಾರ್ಥಿಯು ಬೀದರ್ ಜಿಲ್ಲೆಯ ನಿವಾಸಿಯಾಗಿರಬೇಕು. ಬೀದರ್ ಜಿಲ್ಲೆಯಲ್ಲಿಯೇ 5ನೇ ತರಗತಿ ಓದುತ್ತಿರಬೇಕು. 2015ರ ಮೇ.1 ರಿಂದ 2017ರ ಜು.31ರ ನಡುವೆ ಜನಿಸಿದವರಾಗಿರಬೇಕು. ಹಾಗೆಯೇ 3, 4 ಮತ್ತು 5ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷ ಅಧ್ಯಯನ ಮಾಡಿರಬೇಕು ಎಂದು ಅವರು ಮಾಹಿತಿ ಅವರು ನೀಡಿದ್ದಾರೆ.
ಆನ್‌ಲೈನ್‌ನಲ್ಲಿ ಈಗಾಗಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದ್ದು, ಜು.31ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರವೇಶ ಪರೀಕ್ಷೆಯು 2026ರ ನ.28 ರಂದು ನಡೆಸಲು ನಿರ್ಧರಿಸಲಾಗಿದೆ. ಬೀದರ್ ಜಿಲ್ಲೆಯ ನಿವಾಸಿಗಳಾಗಿರುವ 5ನೇ ತರಗತಿ ವಿದ್ಯಾರ್ಥಿಗಳು ಇದರ ಲಾಭವನ್ನು ಪಡೆದುಕೊಂಡು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿಯು ವೆಬ್‌ಸೈಟ್ navodaya.gov.in ನಲ್ಲಿ ಕ್ಲಿಕ್ ಮಾಡಿದರೆ ಪೋರ್ಟಲ್ ಓಪನ್ ಆಗುತ್ತದೆ. ಕೇಳಿರುವ ಮಾಹಿತಿಯನ್ನು ಸರಿಯಾಗಿ ತುಂಬಿ ಅರ್ಜಿ ಸಲ್ಲಿಸಬೇಕು ಎಂದು ಅವರು ತಿಳಿಸಿದ್ದಾರೆ.






