ಬೀದರ್ | ಹೊಸ ನ್ಯಾಯ ಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಬೀದರ್ : ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ ನಿಯಂತ್ರಣದ ಆದೇಶದ ಅನ್ವಯ ಬೀದರ್ ಜಿಲ್ಲೆಯ ಔರಾದ್ (ಬಿ) ತಾಲ್ಲೂಕಿನ ಕೊಳ್ಳುರು ಮತ್ತು ಕಮಲನಗರ ತಾಲ್ಲೂಕಿನ ಡೊಣಗಾಂವ(ಎಂ) ಗ್ರಾಮಗಳಲ್ಲಿ ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಹ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಹ ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಪಟ್ಟ ತಹಶೀಲ್ದಾರ್ ಕಚೇರಿಗಳಲ್ಲಿ (ಆಹಾರ ಶಾಖೆ) ಮತ್ತು ಉಪ ನಿರ್ದೇಶಕರ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯವರ ಕಾರ್ಯಲಯದಿಂದ ಪಡೆದು, ಭರ್ತಿ ಮಾಡಿ ಸೂಕ್ತ ದಾಖಲೆಗಳೊಂದಿಗೆ ನ.16ರ ಒಳಗಾಗಿ ಸಲ್ಲಿಸತಕ್ಕದ್ದು ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ವಿವರಗಳಿಗಾಗಿ ಸಂಬಂಧಿಸಿದ ತಾಲ್ಲೂಕಿನ ತಹಶೀಲ್ದಾರ್, ಆಹಾರ ಸಿಬ್ಬಂದಿ ಅಥವಾ ಬೀದರ್ ನ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರ ಕಛೇರಿಯ ವೇಳೆಯಲ್ಲಿ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







