Bidar | ಫಿಜಿಯೋಥೆರಪಿಸ್ಟ್ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೀದರ್ : ಜಿಲ್ಲೆಯ ಹುಮನಾಬಾದ್ ತಾಲ್ಲೂಕಿನ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿಆರ್‌ಸಿ) ಕಾರ್ಯಾಲಯದಲ್ಲಿ 2026-27ನೇ ಸಾಲಿಗೆ ಫಿಜಿಯೋಥೆರಪಿಸ್ಟ್ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಗ್ರ ಶಿಕ್ಷಣ ಯೋಜನೆಯ ಕ್ಷೇತ್ರ ಸಮನ್ವಯಾಧಿಕಾರಿ ಪ್ರೀತಂಸಿಂಗ್ ಜಾಧವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹುಮನಾಬಾದ್ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ಕೊಠಡಿಯಲ್ಲಿ ವಿಶೇಷಚೇತನ ಮಕ್ಕಳಿಗೆ ಫಿಜಿಯೋಥೆರಪಿ ಸೇವೆ ಒದಗಿಸುವುದು, ಪಾಲಕರು ಹಾಗೂ ಪೋಷಕರಿಗೆ ಅಗತ್ಯ ಸಲಹೆ ನೀಡುವುದು ಮತ್ತು ನ್ಯೂನತೆಯಿರುವ ಮಕ್ಕಳಿಗೆ ಶಾಲೆಯಲ್ಲಿ ಪೂರಕ ವಾತಾವರಣ ನಿರ್ಮಿಸಲು ಅಗತ್ಯ ಕಾರ್ಯಗಳನ್ನು ನಿರ್ವಹಿಸಲು ಡಿಪಿಟಿ (DPT) ಅಥವಾ ಬಿಪಿಟಿ (BPT) ಪದವಿ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇದರ ಜೊತೆಗೆ, ವಿಶೇಷಚೇತನ ಮಕ್ಕಳಿಗೆ ಥೆರಪಿ ಹಾಗೂ ವ್ಯಾಯಾಮ ಚಟುವಟಿಕೆಗಳ ಸಂದರ್ಭದಲ್ಲಿ ಸಹಾಯ ಮಾಡುವ ಉದ್ದೇಶದಿಂದ ಒಬ್ಬ ಮಹಿಳಾ ಸಹಾಯಕಿಯ ಹುದ್ದೆಗೆ ಹೊರಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜೂ.29ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.




