ಬೀದರ್ | ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ್ : ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಹಲವು ಯೋಜನೆಗಳಿಂದ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಸ್ತ, ಅಂಬಿಗ ಅಥವಾ ಅಂಬಿ, ಗಂಗಾಮತ, ಕಬ್ಬಲಿಗ, ಕೋಲಿ, ಮತ್ತು ಇದರ ಉಪಜಾತಿಗಳ ಅಭಿವೃದ್ಧಿಗಾಗಿ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಅರಿವು ಶೈಕ್ಷಣಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಸಹಾಯಧನ ಯೋಜನೆ ಹಾಗೂ ಸ್ವಾವಲಂಬಿ ಸಾರಥಿ ಯೋಜನೆಯಿಂದ ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಅರ್ಹರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಅನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.4 ಆಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ http://ambigaradevelopment.karnataka.gov.in ದಲ್ಲಿ, ನಿಗಮದ ದೂರವಾಣಿ ಸಂಖ್ಯೆ 080-22864099 ಗೆ ಸಂಪರ್ಕಿಸಬಹುದು. ಇಲ್ಲದಿದ್ದರೆ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.