ಬೀದರ್ | ವಿಶ್ವಕರ್ಮ ಸಮುದಾಯ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ್ : ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಮೂಲಕ ಸಹಾಯಧನ ಅಥವಾ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಅರಿವು ಶೈಕ್ಷಣಿಕ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಯೋಜನೆ, ವಿದೇಶಿ ವ್ಯಾಸಂಗ ಯೋಜನೆ, ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗಳ ಅಡಿಯಲ್ಲಿ ಸಹಾಯಧನ ಅಥವಾ ಸಾಲ ಸೌಲಭ್ಯಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಅರ್ಹರು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್ ಜೀ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗೆ ವೆಬ್‌ಸೈಟ್ https://www.kaushalkar.com/ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜು.2 ಆಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ https://kvcdcl.karnataka.gov.in. ನಲ್ಲಿ ಅಥವಾ ನಿಗಮದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22374848, 7899899039 ಯಿಂದ ಪಡೆಯಬಹುದಾಗಿದೆ. ಹಾಗೆಯೇ ಜಿಲ್ಲೆಗಳಲ್ಲಿ ನಿಗಮದ ದೂರವಾಣಿ ಸಂಖ್ಯೆ : 80507 70005 ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ನಂ. 9-8-15/5ಬಿ, ಬಿವ್ಹಿಬಿ ಕಾಲೇಜು ರಸ್ತೆ, ಮೈಲೂರ್ ಕ್ರಾಸ್, ಬಸವನಗರ-585403 ದೂರವಾಣಿ ಸಂ: 08482-223515 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.