ಬೀದರ್ | ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ್ : 2025-26ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ, ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಅನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ವಿಸ್ತರಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಿಯುಸಿ, ಡಿಪ್ಲೋಮಾ, ಐಟಿಐ ಹಾಗೂ ಪ್ರಥಮ ವರ್ಷದ ಪದವಿ ಮಟ್ಟದ ವಿದ್ಯಾರ್ಥಿಗಳು ಮಾತ್ರ ಅರ್ಜಿ ಸಲ್ಲಿಸುವುದಕ್ಕೆ ಅರ್ಹರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಅರ್ಹ ವಿದ್ಯಾರ್ಥಿಗಳು https://shp.karnataka.gov.in/mwd ಅನ್‌ಲೈನ್ ಮೂಲಕ ಜೂ.28ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ https//mwd.karnataka.gov.in/ ನೋಡಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ವಸತಿ ನಿಲಯಗಳಿಗೆ ಅಥವಾ ಬೀದರ್ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಕಚೇರಿಗೆ ಅಗತ್ಯ ದಾಖಲಾತಿಗಳೊಂದಿಗೆ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 82777 99990 ಹಾಗೂ 08482-224150ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







