ಬೀದರ್: ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಬೀದರ್ : ಜಿಲ್ಲೆಯ ರೈತರ ಮಕ್ಕಳಿಗಾಗಿ ಕಲಬುರಗಿ ಜಿಲ್ಲೆಯ ತಾಲ್ಲೂಕು ಚಿಂಚೋಳಿಯ ಚಂದ್ರಪಳ್ಳಿಯಲ್ಲಿ ಹತ್ತು ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಹರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ತೋಟಗಾರಿಕೆ ಉಪನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ಕನಿಷ್ಠ ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿರಬೇಕು. ತರಬೇತಿ ಪ್ರವೇಶ ಬಯಸುವ ಅಭ್ಯರ್ಥಿಯ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು. ಹಾಗೆಯೇ ಸ್ವಂತ ಸಾಗುವಳಿ ಮಾಡುತ್ತಿರಬೇಕು. ಈ ಬಗ್ಗೆ ಪಹಣಿಯನ್ನು ನೀಡುವುದು ಕಡ್ಡಾಯವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
ತರಬೇತಿ ಅರ್ಜಿಯ ನಮೂನೆಯನ್ನು ಮಾ.1 ರಿಂದ 31ರ ವರೆಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಛೇರಿ (ರಾಜ್ಯ ವಲಯ) ಬೀದರ್ ಅಥವಾ ಇಲಾಖೆ ವೆಬ್‍ಸೈಟ್www.horticulture.kar.nic.in. ದಲ್ಲಿ ಡೌನಲೋಡ್ ಮಾಡಿಕೊಳ್ಳಬಹುದಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಏ.1 ರ ಸಂಜೆ 5:30 ಗಂಟೆಯವರೆಗೆ ಸಲ್ಲಿಸಬಹುದಾಗಿದೆ. ಸಂದರ್ಶನದ ದಿನಾಂಕ ಏ. 8 ಬೆಳಿಗ್ಗೆ 10 ಗಂಟೆ ಆಗಿದ್ದು, ತಮ್ಮ ಮೂಲ ದಾಖಲೆಗಳೊಂದಿಗೆ ತೋಟಗಾರಿಕೆ ಉಪ ನಿರ್ದೇಶಕರು (ಜಿಲ್ಲಾ ಪಂಚಾಯತ) ಇವರ ಕಛೇರಿಯಲ್ಲಿ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 08482-233139 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.







