ಬೀದರ್ | ವಿಕಲಚೇತನರ ಆರೈಕೆದಾರರಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಬೀದರ್ : ವಿಕಲಚೇತನರ ಆರೈಕೆದಾರರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸುಭಾಷ್ ರತ್ನಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 2025-26ನೇ ಸಾಲಿನಲ್ಲಿ ಬೌದ್ದಿಕ ವಿಕಲತೆ, ಶ್ರವಣ ಮತ್ತು ದೃಷ್ಟಿನೂನ್ಯತೆ ಹಾಗೂ ಬಹುವಿಧ ವಿಕಲತೆ ಕಾಯಿಲೆಯಿಂದ ಬಳಲುತ್ತಿರುವ ವ್ಯಕ್ತಿಗಳ ಆರೈಕೆದಾರರಿಗೆ ತಿಂಗಳಿಗೆ 1 ಸಾವಿರ ರೂ.ಗಳ ಪ್ರೋತ್ಸಹ ಧನವನ್ನು ನೀಡಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅರ್ಹರು ಅರ್ಜಿಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಪಡೆದು ಜು.16 ರ ಒಳಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08482-234647 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
Next Story





