ಬೀದರ್ | ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ್ : 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿ ಹಾಗೂ ಪ್ರವರ್ಗ 1ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಅರ್ಹ ವಿದ್ಯಾರ್ಥಿಗಳು www.ssp.postmatric.karnataka.gov.in ಮೂಲಕ ಅ. 31 ರ ಒಳಗಾಗಿ ಅರ್ಜಿ ಸಲ್ಲಿಸಬೇಕು.
ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಕ್ಕಾಗಿ https://bcwd.karnataka.gov.in ವೆಬ್‍ಸೈಟ್ ನೋಡಬಹುದು. ರಾಜ್ಯ ವಿದ್ಯಾರ್ಥಿ ವೇತನ ಸಹಾಯವಾಣಿ 1902 ಅಥವಾ ಇಮೇಲ್ postmetrichelp@karnataka.gov.in ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಸಹಾಯವಾಣಿ 80507 70005 ಅಥವಾ ಇಮೇಲ್ bcwdhelpline@gmail.com ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.





