Bidar | ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ಬೀದರ್ : 2026-27ನೇ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ (1 ರಿಂದ 8ನೇ ತರಗತಿ) ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ವಿದ್ಯಾರ್ಥಿ ವೇತನ ಮಂಜೂರಾದ ವಿದ್ಯಾರ್ಥಿಗಳ ಅರ್ಜಿಗಳನ್ನು ಅಟೋ ರಿನಿವಲ್ ಎಂದು ಪರಿಗಣಿಸಲಾಗುವುದರಿಂದ ಈ ವಿದ್ಯಾರ್ಥಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. 2025-26ನೇ ಸಾಲಿನಲ್ಲಿ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಮಂಜೂರಾಗದೇ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಹೊಸದಾಗಿ ಅರ್ಜಿ ಸಲ್ಲಿಸಬೇಕು ಎಂದು ಅವರು ಹೇಳಿದ್ದಾರೆ.
ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊಸದಾಗಿ ಈ ಯೋಜನೆಯ ಪ್ರಯೋಜನ ಪಡೆಯಲು ವಿದ್ಯಾರ್ಥಿಗಳು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಿಡಿಂಗ್ ಆಗಿರುವ ಬಗ್ಗೆ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಆಕ್ಟೀವ್ ಆಗಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ಈ ಯೋಜನೆಯ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ. ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡುವ ಸಂಬಂಧ ಎಸ್‌ಎಸ್ ಪೋರ್ಟಲ್ ಆನ್‌ಲೈನ್ ssp.karnataka.gov.in ನಲ್ಲಿ ಸೆ.30ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ವೆಬ್‌ಸೈಟ್ dom.karnataka.gov.in ಗೆ ಭೇಟಿ ನೀಡಿ ಅಥವಾ ಹತ್ತಿರದ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.






