ಬೀದರ್ | ಗುತ್ತಿಗೆ ಆಧಾರದ ಮೇಲೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಬೀದರ್ : ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ (ಎನ್.ಹೆಚ್.ಎಂ) 2025-26ನೇ ಸಾಲಿಗೆ ಎಂ.ಬಿ.ಬಿ.ಎಸ್ ವೈದ್ಯ ಹಾಗೂ ತಜ್ಞ ವೈದ್ಯರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಸೋಮವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ಅರ್ಜಿಗಳನ್ನು ವಿತರಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಸಂಪರ್ಕಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.
Next Story





