ಬೀದರ್| ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ಬೀದರ್ : ಜಿಲ್ಲೆಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಗಳಿಗೆ 2026-27ನೇ ಸಾಲಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ್ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಭ್ಯರ್ಥಿಗಳು ತಮ್ಮ ಹೆಸರು, ಪೂರ್ಣ ವಿಳಾಸ (ಮೊಬೈಲ್ ಸಂಖ್ಯೆಯೊಂದಿಗೆ), ಜನ್ಮ ದಿನಾಂಕ, ವಿದ್ಯಾರ್ಹತೆ, ಮತ್ತು ವಾಸ ಸ್ಥಳದ ಮಾಹಿತಿಯನ್ನು ಅರ್ಜಿಯೊಂದಿಗೆ ಸ್ನಾತಕೋತ್ತರ ಪದವಿಯ ದೃಢೀಕೃತ ಅಂಕಪಟ್ಟಿಗಳು, ಬಿಎಡ್ ಪದವಿ ಪಡೆದ ದೃಢೀಕೃತ ಅಂಕಪಟ್ಟಿಗಳು, ಜನ್ಮ ದಿನಾಂಕಕ್ಕೆ ಸಂಬಂಧಿಸಿದ ದಾಖಲೆಯ ದೃಢೀಕೃತ ಪ್ರತಿಯೊಂದಿಗೆ ಜೂ.3ರ ಒಳಗಾಗಿ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ ಸಲ್ಲಿಸಬೇಕು ಎಂದು ಅವರು ಮಾಹಿತಿ ನೀಡಿದ್ದಾರೆ.
ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಲಾಗುವುದು. ನೇರ ನೇಮಕಾತಿ, ವರ್ಗಾವಣೆ ಹಾಗೂ ನಿಯೋಜನೆ ಮೂಲಕ ಹುದ್ದೆ ತುಂಬುವವರೆಗೆ ಅಥವಾ 2026-27ನೇ ಶೈಕ್ಷಣಿಕ ಸಾಲಿನ ಅಂತ್ಯದವರಿಗೆ ಇದರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಮಾತ್ರ ಈ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಬೀದರ್ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಚೇರಿಯನ್ನು ಅಥವಾ ಸಂಬಂಧಪಟ್ಟ ಕಾಲೇಜುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ






