Bidar | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ್: ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಸಮಿತಿಯ ಸದಸ್ಯ ಕಾರ್ಯದರ್ಶಿ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೀದರ್ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ 27 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 103 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು bidar.nic.in ವೆಬ್ಸೈಟ್ ಮೂಲಕ ಡಿಸೆಂಬರ್ 11ರ ಸಂಜೆ 5.30ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆ ತಿಳಿಸಿದೆ.
Next Story




