Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕನ್ನೇರಿ ಸ್ವಾಮಿಯನ್ನು ಗುಂಡಾ...

Bidar | ಕನ್ನೇರಿ ಸ್ವಾಮಿಯನ್ನು ಗುಂಡಾ ಕಾಯ್ದೆಯಡಿ ಬಂಧಿಸಿ: ಮಾರುತಿ ಬೌದ್ಧೆ ಆಗ್ರಹ

ಜಿಲ್ಲಾ ಪ್ರಥಮ ʻದಲಿತ ಬಂಡಾಯ ಸಮ್ಮೇಳನʼ

ವಾರ್ತಾಭಾರತಿವಾರ್ತಾಭಾರತಿ7 Nov 2026 7:37 PM IST
share
Bidar | ಕನ್ನೇರಿ ಸ್ವಾಮಿಯನ್ನು ಗುಂಡಾ ಕಾಯ್ದೆಯಡಿ ಬಂಧಿಸಿ: ಮಾರುತಿ ಬೌದ್ಧೆ ಆಗ್ರಹ

ಬೀದರ್: ಕನ್ನೇರಿ ಸ್ವಾಮಿ ಅವರು ಬೀದರ್‌ನಲ್ಲಿ ಈ ಹಿಂದೆ ಬಸವಾದಿ ಶರಣರ ಹೆಸರಿನಲ್ಲಿ ಹಿಂದೂ ಸಮಾವೇಶ ನಡೆಸಿದ್ದಾರೆ. ವಿಜಯಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಂವಿಧಾನದಲ್ಲಿಯೂ ಮನುಸ್ಮೃತಿ ಇದೆ ಎಂಬ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಕರ್ನಾಟಕ ಸರ್ಕಾರ ಅವರನ್ನು ಗುಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗಟ್ಟಬೇಕು ಎಂದು ದಲಿತ ಬಂಡಾಯ ಸಮ್ಮೇಳನದ ಸರ್ವಾಧ್ಯಕ್ಷ ಮಾರುತಿ ಬೌದ್ಧೆ ಆಗ್ರಹಿಸಿದರು.

ನಗರದ ಡಾ. ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಶನಿವಾರ ಆಯೋಜಿಸಿದ್ದ ಬೀದರ್ ಜಿಲ್ಲಾ ಪ್ರಥಮ ‘ದಲಿತ ಬಂಡಾಯ ಸಮ್ಮೇಳನ’ದ ಸರ್ವಾಧ್ಯಕ್ಷರ ನುಡಿಗಳನ್ನಾಡಿದ ಅವರು, ಬಸವಣ್ಣನವರು ಮೊಟ್ಟಮೊದಲಿಗೆ ತಮ್ಮ ಮನೆಯಲ್ಲಿಯೇ ಬಂಡಾಯ ಆರಂಭಿಸಿದ್ದರು. ಬೀದರ್‌ನಲ್ಲಿ ಗವಾನ್ ಅವರು ಮದರಸಾ ಮೂಲಕ ಶೈಕ್ಷಣಿಕ ಕೊಡುಗೆ ನೀಡಿದ್ದಾರೆ. ಇಂತಹ ಬಂಡಾಯದ ನೆಲವಾದ ಬೀದರ್‌ನಲ್ಲಿ ನಾವೂ ಅನೇಕ ಹೋರಾಟಗಳನ್ನು ನಡೆಸಿದ್ದೇವೆ ಎಂದರು.

ಡಾ. ಬಿ.ಆರ್. ಅಂಬೇಡ್ಕರ್ ಅವರು ಮೊದಲ ಬಾರಿಗೆ ಶಾಲೆಗೆ ಸೇರಿದ ದಿನ ನವೆಂಬರ್ 7. ಮಹಾರಾಷ್ಟ್ರ ಸರ್ಕಾರ ಈ ದಿನವನ್ನು ವಿದ್ಯಾರ್ಥಿ ದಿನವನ್ನಾಗಿ ಆಚರಿಸುತ್ತಿದೆ. ಅದೇ ರೀತಿ ಕರ್ನಾಟಕದಲ್ಲಿಯೂ ನವೆಂಬರ್ 7 ಅನ್ನು ವಿದ್ಯಾರ್ಥಿ ದಿನವನ್ನಾಗಿ ಆಚರಿಸಲು ಆದೇಶ ಹೊರಡಿಸಬೇಕು ಎಂದು ಮನವಿ ಮಾಡಿದರು.

ಹಿಂದೆ ಸಮಾಜದಲ್ಲಿ ಅಸ್ಪೃಶ್ಯತೆ ವ್ಯಾಪಕವಾಗಿತ್ತು. ಅದರ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಸಿದ್ದೇವೆ. ಇದೀಗ ನಮಗೆ ಭೂಮಿ ಇಲ್ಲದಂತಾಗಿದೆ. ನಾವು ಭೂಮಿ ಸಾಗುವಳಿ ಮಾಡುತ್ತಿದ್ದರೂ ಸಿ-ಫಾರಂ ಸಿಗುತ್ತಿಲ್ಲ. ಬೀದರ್ ಜಿಲ್ಲೆಯಲ್ಲಿ ಸಾಗುವಳಿ ಮಾಡುತ್ತಿರುವವರಿಗೆ ಸಿ-ಫಾರಂ ಕೊಡಿಸಬೇಕು ಎಂದು ಒತ್ತಾಯಿಸಿದರು.

ನಮ್ಮ ಜನರಿಗೆ ಊರಿನಲ್ಲಿ ಕೂಲಿ ಮಾಡಿ ಬದುಕುವುದೂ ಕಷ್ಟವಾಗಿದೆ. ಎಲ್ಲವೂ ಖಾಸಗೀಕರಣವಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸುವಂತಾಗಿದೆ. ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಕೂಡ ಅನ್ಯಾಯದ ವಿರುದ್ಧ ಹೋರಾಟ ಮುಂದುವರಿಸಲಿದೆ ಎಂದು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮಾತನಾಡಿ, ಮಾರುತಿ ಬೌದ್ಧೆ ಅವರು ಸುಮಾರು 40 ವರ್ಷಗಳಿಂದ ಅಸಮಾನತೆ, ಅಸ್ಪೃಶ್ಯತೆ ಹಾಗೂ ಜಾತೀಯತೆಯ ವಿರುದ್ಧ ಸಮಸಮಾಜ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಬುದ್ಧ, ಬಸವ ಮತ್ತು ಅಂಬೇಡ್ಕರ್ ಅವರ ತತ್ವಗಳನ್ನು ಮೈಗೂಡಿಸಿಕೊಂಡು ಸಮಾಜದ ಪರವಾಗಿ ಶ್ರಮಿಸಿರುವ ಅವರನ್ನು ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಸಂತಸದ ವಿಚಾರವಾಗಿದೆ ಎಂದರು.

ಕನ್ನಡ ಸಾಹಿತ್ಯವು ಜಗತ್ತಿನ ಸಾಹಿತ್ಯಕ್ಕೆ ಅದ್ಭುತ ಕೊಡುಗೆ ನೀಡಿದೆ. ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯ ಸಮಾಜಕ್ಕೆ ಹಲವು ರೀತಿಯಲ್ಲಿ ಮಾರ್ಗದರ್ಶನ ಮಾಡಿವೆ. ಸಮಾಜದಲ್ಲಿ ಪರಿವರ್ತನೆಗೆ ಅನೇಕ ಕಾರಣಗಳಿದ್ದರೂ ಅತ್ಯಂತ ಮಹತ್ವದ ಕಾರಣ ಸಾಹಿತ್ಯವಾಗಿದೆ. ಸಾಹಿತ್ಯ ಇಲ್ಲದಿದ್ದರೆ ಮನುಷ್ಯ ಪಶುವಿನಂತಾಗುತ್ತಿದ್ದ. ಮನುಷ್ಯನಲ್ಲಿರುವ ಕ್ರೋಧವನ್ನು ಹೋಗಲಾಡಿಸಿ ಪ್ರೀತಿ ಬೆಳೆಸುವ ಶಕ್ತಿ ಸಾಹಿತ್ಯಕ್ಕಿದೆ. ಆದ್ದರಿಂದ ಪುಸ್ತಕ ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಾಹಿತ್ಯವು ಅಧಿಕಾರದ ಪರವಾಗಿರಬಾರದು. ಅಧಿಕಾರದಲ್ಲಿರುವವರ ಲೋಪದೋಷಗಳನ್ನು ಹೊರತರುವ ಕೆಲಸವನ್ನು ಸಾಹಿತ್ಯ ಮಾಡಬೇಕು. ಸಮಾಜದ ಕಟ್ಟಕಡೆಯ ಮನುಷ್ಯನಿಗೆ ಸಾಮಾಜಿಕ ನ್ಯಾಯ ದೊರೆತಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ. ದೇಶದ ಜನರು ಸಾಮಾಜಿಕವಾಗಿ, ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಬಲರಾದಾಗ ಮಾತ್ರ ಭಾರತ ಬಲಿಷ್ಠ ರಾಷ್ಟ್ರವಾಗಲು ಸಾಧ್ಯ. ಬರೀ ಭಾಷಣಗಳಿಂದ ವಿಶ್ವಗುರುವಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಹಿರಿಯ ಹೋರಾಟಗಾರ ಡಿ.ಜಿ. ಸಾಗರ್ ಮಾತನಾಡಿ, ದೇಶ ಇಂದು ಅಘೋಷಿತ ತುರ್ತು ಪರಿಸ್ಥಿತಿಯಂತಹ ಸನ್ನಿವೇಶವನ್ನು ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸಹೋದರತೆ, ಭಾತೃತ್ವ ಮತ್ತು ಸ್ವಾತಂತ್ರ್ಯ ಗಂಡಾಂತರದಲ್ಲಿವೆ. ಹೀಗಾಗಿ ದಲಿತ ಚಳವಳಿ ಮರುಹುಟ್ಟು ಪಡೆಯಬೇಕಾಗಿದೆ ಎಂದರು.

ಜಾತೀಯತೆ, ಕೋಮುವಾದ ಹಾಗೂ ಮನುವಾದ ಇಂದು ಹೆಚ್ಚೆಚ್ಚು ಬಲಿಷ್ಠವಾಗುವ ಮೂಲಕ ಮನುಷ್ಯ ಸಂಬಂಧಗಳನ್ನು ಹಾಳುಮಾಡುತ್ತಿವೆ. ಹಿಂದೂಗಳಲ್ಲದ ಇತರ ಧರ್ಮಗಳ ಜನರನ್ನು ದೇಶದ್ರೋಹಿಗಳಂತೆ ಬಿಂಬಿಸಿ, ಅವರ ಬಗ್ಗೆ ಹಿಂದೂಗಳಲ್ಲಿ ದ್ವೇಷ ಬಿತ್ತಲಾಗುತ್ತಿದೆ. ಸಾಮಾಜಿಕ ಸಾಮರಸ್ಯ ಹಾಳುಮಾಡಿ ಹಿಂಸೆಯನ್ನು ಪ್ರಚೋದಿಸಲಾಗುತ್ತಿದೆ. ಪ್ರಜಾಪ್ರಭುತ್ವದ ಮೂಲ ಆಧಾರವಾಗಿರುವ ಚುನಾವಣಾ ವ್ಯವಸ್ಥೆಯನ್ನು ಭ್ರಷ್ಟಗೊಳಿಸಿ, ಮತಗಳನ್ನು ಕದಿಯುವ ಮೂಲಕ ಅನೈತಿಕವಾಗಿ ಅಧಿಕಾರಕ್ಕೆ ಬರಲಾಗುತ್ತಿದೆ. ಕ್ರೈಸ್ತ, ಬೌದ್ಧ, ಮುಸ್ಲಿಂ, ಹಿಂದುಳಿದ ವರ್ಗಗಳು, ಆದಿವಾಸಿಗಳು, ಅಲೆಮಾರಿಗಳು ಹಾಗೂ ಬುಡಕಟ್ಟು ಸಮುದಾಯಗಳ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ನುಸುಳುಕೋರರನ್ನು ಪತ್ತೆಹಚ್ಚುವ ನೆಪದಲ್ಲಿ ಎಸ್‌ಐಆರ್ ಮೂಲಕ ಭಾರತದಲ್ಲಿಯೇ ಹುಟ್ಟಿ ಬೆಳೆದವರನ್ನೂ ಈ ದೇಶದವರಲ್ಲ ಎಂದು ಹೇಳಲಾಗುತ್ತಿದೆ. ಮತದಾನದ ಹಕ್ಕು ಕಳೆದುಕೊಂಡರೆ ಸಂವಿಧಾನಬದ್ಧ ಹಕ್ಕುಗಳು ಮತ್ತು ಪ್ರಜಾಪ್ರಭುತ್ವವನ್ನೇ ಕಳೆದುಕೊಂಡಂತೆ. ಆದ್ದರಿಂದ ನಾವೆಲ್ಲರೂ ಇದನ್ನು ಖಂಡಿಸಬೇಕು. ಹಿಂದುತ್ವವನ್ನು ಪ್ರತಿನಿಧಿಸುವ ಸಂಘಟನೆಗಳನ್ನು ಹಿಮ್ಮೆಟ್ಟಿಸಲು ಒಗ್ಗಟ್ಟಿನಿಂದ ಹೋರಾಟ ನಡೆಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಸ್.ಎಂ. ಜನವಾಡಕರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸುರೇಶ್ ಚನ್ನಶೆಟ್ಟಿ ಮಾತನಾಡಿದರು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಭಂತೆ ವರಜ್ಯೋತಿ, ಶಾಸಕರಾದ ರಹೀಂ ಖಾನ್, ಡಾ. ಶೈಲೇಂದ್ರ ಬೇಲ್ದಾಳೆ, ಎಸ್.ಪಿ. ಸುಳ್ಳದ್, ಶಾಂತಾಬಾಯಿ ಕಾಂಬಳೆ, ಶಿವಯ್ಯ ಸ್ವಾಮಿ, ಸಿ.ಬಿ. ಸೋಮಶೆಟ್ಟಿ, ಕಲ್ಯಾಣರಾವ್, ದೇವಿದಾಸ್ ಚಿಮಕೋಡ್, ಶಿವಲೀಲಾ, ಗುರುನಾಥ್ ರಾಜಗೀರಾ, ಅರುಣ್ ಪಟೇಲ್, ವಿಠಲದಾಸ್ ಪ್ಯಾಗೆ, ಸರೇಶ್ ಹಾದಿಮನಿ, ಎಚ್. ಶಂಕರ್, ಬಾಬು ಟೈಗರ್ ಹಾಗೂ ಎಂ.ಎಸ್. ಮನೋಹರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X