Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ಬಂಧಿಸಲು ತೆರಳಿದ್ದ ವೇಳೆ...

ಬೀದರ್ | ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಕಳ್ಳತನ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ವಾರ್ತಾಭಾರತಿವಾರ್ತಾಭಾರತಿ2 May 2025 3:28 PM IST
share
ಬೀದರ್ | ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ; ಕಳ್ಳತನ ಪ್ರಕರಣದ ಆರೋಪಿ ಕಾಲಿಗೆ ಗುಂಡೇಟು

ಬೀದರ್ : ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ನಗರದ ಹೊನ್ನಿಕೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಬಂಧಿತ ಆರೋಪಿಗಳು ಮಹಾರಾಷ್ಟ್ರದ ಬೀಡ್ ಜಿಲ್ಲೆಯ ನಿವಾಸಿಗಳಾಗಿದ್ದು, ಕರ್ತಾರಸಿಂಗ್ ಎಂಬ ಆರೋಪಿಯ ಬಲಗಾಲಿಗೆ ಮೂರು ಸುತ್ತಿನ ಫೈರಿಂಗ್ ಮಾಡಲಾಗಿದ್ದು, ಇನ್ನುಳಿದ ಆರೋಪಿಗಳಾದ ಜಗದೀತ್ ಸಿಂಗ್ ಮತ್ತು ಅಕ್ಷಯ್ ಎಂಬವರನ್ನು ಬಂಧಿಸಲಾಗಿದೆ.

ಘಟನೆಯ ವಿವರ : ಎ. 26ರಂದು ನಗರದ ಗಾಂಧಿ ಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಓಲ್ಡ್ ಆದರ್ಶ ಕಾಲೋನಿಯ ಮನೆ ಒಂದರಲ್ಲಿ ಇಬ್ಬರು ಹೆಣ್ಣು ಮಕ್ಕಳನ್ನು ಒಂದು ರೂಮಿನಲ್ಲಿ ಕೂಡಿ ಹಾಕಿ, ಮನೆಯಲ್ಲಿದ್ದ ಸುಮಾರು 280 ಗ್ರಾಂ ಚಿನ್ನವನ್ನು ದರೋಡೆ ಮಾಡಲಾಗಿತ್ತು. ಈ ಘಟನೆ ಕುರಿತಾಗಿ ಗಾಂಧಿ ಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸಲು ಪೊಲೀಸರು ತಂಡ ರಚನೆ ಮಾಡಿದ್ದರು. ಮೇ 2 ರ ಮುಂಜಾನೆ ಭಾಲ್ಕಿ ಡಿವೈಎಸ್‌ಪಿ ಶಿವಾನಂದ ಪವಾಡಶೆಟ್ಟಿ ನೇತೃತ್ವದಲ್ಲಿ ಆರೋಪಿಗಳ ಶೋಧಕ್ಕಾಗಿ ಕಾರ್ಯಾಚರಣೆ ನಡೆಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಹೊನ್ನಿಕೇರಿ ಬಳಿ ಆರೋಪಿಗಳು ಇರುವ ವಿಷಯ ತಿಳಿದು, ಬಂಧಿಸಲು ಹೋದಾಗ ಆರೋಪಿಗಳು ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾರೆ. ದರೋಡೆಕೋರರ ಹಲ್ಲೆಯಿಂದ ಗ್ರಾಮೀಣ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಮಕ್ಸೂದ್‌ ಅವರ ಭುಜಕ್ಕೆ ಗಾಯವಾಗಿದೆ. ಇದರಿಂದಾಗಿ ತಮ್ಮನ್ನು ರಕ್ಷಿಸಿಕೊಳ್ಳಲು ಪೊಲೀಸರು ಆರೋಪಿಯ ಕಾಲಿಗೆ ಗುಂಡೇಟು ಹೊಡೆದು ಬಂಧಿಸಿದ್ದಾರೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಮತ್ತು ಆರೋಪಿಯನ್ನು ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ಭೇಟಿ ನೀಡಿದ್ದಾರೆ.

ಈ ಪ್ರಕರಣದಲ್ಲಿ ಒಟ್ಟು 5 ಜನ ಆರೋಪಿಗಳು ಭಾಗಿಯಾಗಿದ್ದು, ಈಗಾಗಲೇ ಮೂವರನ್ನು ಬಂಧಿಸಲಾಗಿದೆ. ಕರ್ತಾರ್ ಸಿಂಗ್ ಎಂಬಾತನ ಮೇಲೆ ದರೋಡೆ, ಕಳ್ಳತನ ಹೀಗೆ ವಿವಿಧ 18 ಪ್ರಕರಣ ದಾಖಲಾಗಿವೆ. ಬಂಧಿತರಿಂದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಇಬ್ಬರು ಪ್ರಮುಖ ಆರೋಪಿಗಳು ಪರಾರಿಯಾಗಿದ್ದು, ಶೋಧಕಾರ್ಯ ನಡೆಯುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X