Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಮತದಾರರ ಪಟ್ಟಿ ಪರಿಷ್ಕರಣೆಗೆ...

Bidar | ಮತದಾರರ ಪಟ್ಟಿ ಪರಿಷ್ಕರಣೆಗೆ ಔರಾದ್‌ನಲ್ಲಿ ಜಾಗೃತಿ ಬೈಕ್ ರ್‍ಯಾಲಿ

ವಾರ್ತಾಭಾರತಿವಾರ್ತಾಭಾರತಿ15 July 2026 6:26 PM IST
share
Bidar | ಮತದಾರರ ಪಟ್ಟಿ ಪರಿಷ್ಕರಣೆಗೆ ಔರಾದ್‌ನಲ್ಲಿ ಜಾಗೃತಿ ಬೈಕ್ ರ್‍ಯಾಲಿ
ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನಿಗೆ ಅಮೂಲ್ಯ : ಕಿರಣ್ ಪಾಟೀಲ್

ಔರಾದ್ : ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಎಲ್ಲ ಅರ್ಹ ಮತದಾರರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಖಚಿತಪಡಿಸಿಕೊಳ್ಳಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಿರಣ್ ಪಾಟೀಲ್ ಹೇಳಿದರು.

ಪಟ್ಟಣದಲ್ಲಿ ಬುಧವಾರ ತಾಲೂಕು ಆಡಳಿತ ಹಾಗೂ ತಾಲೂಕು ಪಂಚಾಯಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಬೈಕ್ ರ್‍ಯಾಲಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿಯೊಬ್ಬ ಅರ್ಹ ಮತದಾರರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ಮತದಾರರ ಪಟ್ಟಿಯಲ್ಲಿರುವ ತಮ್ಮ ಹೆಸರು, ವಿಳಾಸ ಹಾಗೂ ಇತರೆ ಮಾಹಿತಿಯನ್ನು ಪರಿಶೀಲಿಸಿ ಅಗತ್ಯವಿದ್ದರೆ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಶಿವಕುಮಾರ್ ಘಾಟೆ ಮಾತನಾಡಿ, ಮತದಾರರ ಪಟ್ಟಿಯನ್ನು ನಿಖರ ಹಾಗೂ ಪಾರದರ್ಶಕವಾಗಿಸುವುದು ಎಸ್‌ಐಆರ್ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಸಾರ್ವಜನಿಕರು ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಚುನಾವಣಾ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

ಬೈಕ್ ರ್‍ಯಾಲಿಯು ಕನ್ನಡಾಂಬೆ ವೃತ್ತ, ಉಪ್ಪೆ ಪೆಟ್ರೋಲ್ ಪಂಪ್, ತಾಲೂಕು ಪಂಚಾಯಿತಿ ಕಚೇರಿ, ಬಸ್ ನಿಲ್ದಾಣ ಹಾಗೂ ಶಿವಾಜಿ ವೃತ್ತ ಮಾರ್ಗವಾಗಿ ಸಂಚರಿಸಿ ಬಸವೇಶ್ವರ ವೃತ್ತದಲ್ಲಿ ಸಮಾರೋಪಗೊಂಡಿತು. ರ್‍ಯಾಲಿಯುದ್ದಕ್ಕೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ರವಿಸಕುಮಾರ್, ಟಿಎಚ್ಒ ಡಾ. ಅನಿಲಕುಮಾರ್ ಎಕಲಾರೆ, ಮಲ್ಲಿಕಾರ್ಜುನ್, ಶರಣಪ್ಪ ನಾಗಲಗಿದ್ದೆ, ಶ್ರೀಪತಿ ಚಿಟಗಿರೆ, ಮಲ್ಲಿಕಾರ್ಜುನ್ ಆಲೂರೆ, ಬಿ.ಎಂ. ಅಮರವಾಡಿ, ಶರಣಬಸಪ್ಪ ಸಾವಳೆ, ರಾಜಕುಮಾರ್ ಗೊರ್ಟೆ, ಆನಂದ್ ಬಿರಾದಾರ್, ನಾಗನಾಥ್ ಕುಂಟೆ, ಪ್ರೇಮ್ ರಾಠೋಡ್ ಹಾಗೂ ಅಂಬಾದಾಸ್ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿ ಮತದಾರರ ಜಾಗೃತಿ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿದರು.

Tags

AuradBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X