Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ರೇಬೀಸ್‌ ಮುಕ್ತ ಸಮಾಜ...

Bidar | ರೇಬೀಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಗತ್ಯ: ಬಸವರಾಜ್ ಭತಮುರ್ಗೆ

ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿಶ್ವ ರೇಬೀಸ್ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ29 Sept 2026 4:34 PM IST
share
Bidar | ರೇಬೀಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಜಾಗೃತಿ ಅಗತ್ಯ: ಬಸವರಾಜ್ ಭತಮುರ್ಗೆ

ಬೀದರ್: ರೇಬೀಸ್‌ ರೋಗಮುಕ್ತ ಸಮಾಜ ನಿರ್ಮಾಣ ಮಾಡಲು ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿ ಸದಸ್ಯ ಬಸವರಾಜ್ ಭತಮುರ್ಗೆ ಹೇಳಿದರು.

ನಗರದ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಆರೋಗ್ಯ ಕೇಂದ್ರ, ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಸಂಘ (ಅಲುಮ್ನಿ ಅಸೋಸಿಯೇಷನ್) ಹಾಗೂ ಹೈದರಾಬಾದ್‌ನ ಇಂಡಿಯನ್ ಇಮ್ಯುನೊಲಾಜಿಕಲ್ಸ್ ಲಿಮಿಟೆಡ್‌ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಆಯೋಜಿಸಿದ್ದ 20ನೇ ‘ವಿಶ್ವ ರೇಬೀಸ್ ದಿನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಕ್ಕಿಂತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದು ಹೆಚ್ಚು ಸೂಕ್ತವಾಗಿದೆ. ರೇಬೀಸ್‌ ರೋಗದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಮೂಲಕ ರೋಗ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಾವಿದ್ಯಾಲಯದ ಡೀನ್ ಡಾ. ಎಂ.ಕೆ. ತಾಂಡಲೆ, ಪ್ರಾಣಿಗಳಲ್ಲಿ ರೇಬೀಸ್‌ ರೋಗವನ್ನು ತಡೆಗಟ್ಟುವುದರ ಮೂಲಕ ಮಾತ್ರ ಮಾನವರಲ್ಲಿ ಈ ರೋಗ ಹರಡುವುದನ್ನು ನಿಯಂತ್ರಿಸಲು ಸಾಧ್ಯ. ಇದಕ್ಕಾಗಿ ಪ್ರತಿಯೊಬ್ಬರ ಸಹಕಾರ ಹಾಗೂ ಒಗ್ಗಟ್ಟಿನ ಕಾರ್ಯ ಅತ್ಯಗತ್ಯ ಎಂದು ತಿಳಿಸಿದರು.

ಎಸ್‌ಆರ್‌ಡಿಡಿಎಲ್ ವಿಭಾಗದ ಮುಖ್ಯಸ್ಥ ಡಾ. ಶಿವರಾಜ್ ಮುರಗ್ ಮಾತನಾಡಿ, ಪ್ರಸಕ್ತ ಸಾಲಿನ ವಿಶ್ವ ರೇಬೀಸ್ ದಿನದ ಘೋಷವಾಕ್ಯ ‘ಒಟ್ಟಾಗಿ ಶ್ರಮಿಸೋಣ, ರೇಬೀಸ್ ಗೆಲ್ಲೋಣ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಂಗವಾಗಿ ನಡೆದ ಲಸಿಕಾ ಅಭಿಯಾನದಲ್ಲಿ ಒಟ್ಟು 111 ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ 0, 7 ಮತ್ತು 21 ದಿನಗಳ ವೇಳಾಪಟ್ಟಿಯಂತೆ ನೀಡಲಾಗುವ ರೇಬೀಸ್ ನಿರೋಧಕ ಲಸಿಕೆಯ ಮೊದಲ ಡೋಸ್ ಅನ್ನು ಉಚಿತವಾಗಿ ನೀಡಲಾಯಿತು. ಅಲ್ಲದೆ, ಶಿಬಿರದಲ್ಲಿ ಸಾರ್ವಜನಿಕರ 40ಕ್ಕೂ ಹೆಚ್ಚು ಸಾಕುಪ್ರಾಣಿಗಳಿಗೆ ಉಚಿತವಾಗಿ ರೇಬೀಸ್ ನಿರೋಧಕ ಲಸಿಕೆ ಹಾಕಲಾಯಿತು.

ಈ ಸಂದರ್ಭದಲ್ಲಿ ಕರ್ನಾಟಕ ಪಶುವೈದ್ಯಕೀಯ ವಿಶ್ವವಿದ್ಯಾಲಯದ ವ್ಯವಸ್ಥಾಪಕ ಮಂಡಳಿಯ ಸದಸ್ಯ ವಿಜಯಕುಮಾರ್ ಪಾಟೀಲ್, ಡಾ. ಮಲ್ಲಿನಾಥ್ ಕೆ. ಸಿ., ಡಾ. ಭಗವಂತಪ್ಪ ಬಿ., ಡಾ. ಶೇಷರಾವ್, ಡಾ. ವೆಂಕನಗೌಡ ಟಿ., ಡಾ. ರೂಪಾಲಿ ಹಾಗೂ ವೈದ್ಯಾಧಿಕಾರಿ ಡಾ. ಶಹಮೀರ್ ಫಾತಿಮಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

Tags

SocietyrabiesBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X