Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. ಬೀದರ್ | ರಾಜ್ಯದ ಎಲ್ಲಾ...

ಬೀದರ್ | ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆಯುರ್ವೇದಿಕ್‌ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಆರಂಭಿಸಲಿ : ಡಾ.ಡಿ.ಪಿ.ರಮೇಶ್

15ನೇ ಪಾರಂಪರಿಕ ವೈದ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ3 March 2025 3:38 PM IST
share
Photo of Program

ಬೀದರ್ : ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಆಯುರ್ವೇದಿಕ್‌ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸುವ ಮೂಲಕ ಸರ್ಕಾರ ಪಾರಂಪರಿಕ ವೈದ್ಯರಿಗೆ ತರಬೇತಿ ನೀಡಬೇಕು ಎಂದು ಬೆಂಗಳೂರಿನ ಖ್ಯಾತ ಪಂಚಗವ್ಯ ತಜ್ಞ ಡಾ.ಡಿ.ಪಿ.ರಮೇಶ್ ಅವರು ಒತ್ತಾಯಿಸಿದರು.

ಇಂದು ಜಿಲ್ಲಾಡಳಿತ, ಕರ್ನಾಟಕ ಜೀವ ವೈವಿಧ್ಯ ಮಂಡಳಿ, ಪಾರಂಪರಿಕ ವೈದ್ಯ ಪರಿಷತ್ತು ಹಾಗೂ ಲಿಂಗಸುಗೂರಿನ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ತು ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ಚನ್ನಬಸವ ಪಟ್ಟದೇವರು ರಂಗಮಂದಿರದಲ್ಲಿ ನಡೆಯುತ್ತಿರುವ ʼ15ನೇ ಪಾರಂಪರಿಕ ವೈದ್ಯ ಸಮ್ಮೇಳನʼದಲ್ಲಿ ಅವರು ಮಾತನಾಡಿದರು.

ಕ್ಯಾನ್ಸರ್ ಚಿಕಿತ್ಸೆ ಎಂದರೆ ಕೇವಲ ಕಿಮೋತೆರಪಿ, ರೆಡಿಯೋತೆರಪಿ ಅಲ್ಲ. ಅವುಗಳಿಗೂ ಮೀರಿದ ಅಡ್ಡ ಪರಿಣಾಮಗಳಿಲ್ಲದ ಚಿಕಿತ್ಸೆ ಭಾರತೀಯ ಆಯುರ್ವೇದದಲ್ಲಿದೆ. ಪಂಚಗವ್ಯ ಚಿಕಿತ್ಸೆ ಅತ್ಯಂತ ಕಡಿಮೆ ಹಣದಲ್ಲಿ ಪಡೆಯಬಹುದು. ಇದಕ್ಕೆ ಸರ್ಕಾರ ಅವಕಾಶ ನೀಡಬೇಕಾಗಿದೆ. ಕ್ಯಾನ್ಸರ್ ಬರದಂತೆ ತಡೆಯಬೇಕಾದರೆ ನಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಪ್ಲಾಸ್ಟಿಕ್ ಬಾಟಲಿ ನೀರು, ಸಿಂಟ್ಯಾಕ್ಸ್ ಒಳಗಿನ ನೀರು, ಮಿನರಲ್, ಚಹಾ ಕಪ್ ಇವು ಕ್ಯಾನ್ಸರ್ ರೋಗಕ್ಕೆ ಮೂಲ ಕಾರಣವಾಗಿವೆ. ಚಿಕ್ಕ ಮಕ್ಕಳು ಕುರಕುರೆ ತಿನ್ನುವುದರಿಂದ ಮಕ್ಕಳ ದೇಹದ ಮೇಲೆ ಅತಿಯಾದ ದುಷ್ಪರಿಣಾಮ ಬೀರುತ್ತಿದೆ. ಇದಕ್ಕೆ ಆಯುರ್ವೇದ ಸೂಕ್ತ ಚಿಕಿತ್ಸೆಯಾಗಿದೆ ಎಂದು ತಿಳಿಸಿದರು.

ಗದಗ ಜಿಲ್ಲೆಯ ವೈದ್ಯ ಹನುಮಂತ ಮಳಲಿ ಮಾತನಾಡಿ, ಭಾರತೀಯ ಆಯುರ್ವೇದದ ಬಗ್ಗೆ ಸಂವಿಧಾನದಲ್ಲಿ ಉಲ್ಲೇಖವಾಗಿದೆ. ಪ್ರಾಕೃತಿಕ ವೈದ್ಯ ಪದ್ಧತಿಯನ್ನು ಸಾಂಸ್ಕೃತಿಕ ಪದ್ಧತಿಯೆಡೆಗೆ ಕೊಂಡೊಯ್ಯುವುದೇ ಭಾರತದ ಆಯುರ್ವೇದ ವೈದ್ಯ ಪದ್ಧತಿಯಾಗಿದೆ. ಭಾರತದಲ್ಲಿ ಒಟ್ಟು 6 ಲಕ್ಷ ಪಾರಂಪರಿಕ ವೈದ್ಯರಿದ್ದಾರೆ. ಕರ್ನಾಟಕದಲ್ಲಿ 31 ಸಾವಿರ ವೈದ್ಯರಿದ್ದಾರೆ. ಇವರಿಗೆಲ್ಲಾ ಸರ್ಕಾರ ಮಾನ್ಯತೆ ನೀಡಿದರೆ ಜನರ ರೋಗ ವಾಸಿಯಾಗಿ ಆರೋಗ್ಯಯುತ ರಾಷ್ಟ್ರ ನಿರ್ಮಾಣವಾಗುವುದರಲ್ಲಿ ಸಂದೇಹವಿಲ್ಲ ಎಂದರು.

ಆಯುರ್ವೇದದ ಮೇಲಿನ ದಾಳಿ ಇಡೀ ಭಾರತದ ಮೇಲಿನ ದಾಳಿಯಾಗಿದೆ. ಅದು ತಡೆಗಟ್ಟಲು ಸರ್ಕಾರ ಕ್ರಮ ವಹಿಸಬೇಕು. ಹಿರಿಯ ವೈದ್ಯರು ತಮ್ಮ ಪಾರಂಪರಿಕ ಜ್ಞಾನವನ್ನು ಮುಂದಿನ ಪೀಳಿಗೆಗೆ ಹೇಳಿಕೊಡಬೇಕು. ಯಾವುದೇ ಕಾರಣಕ್ಕೂ ಮುಚ್ಚಿಡಬಾರದು ಎಂದು ತಿಳಿ ಹೇಳಿದರು.

ಈ ಸಂದರ್ಭದಲ್ಲಿ ಚನ್ನಬಸವಂತ ರೆಡ್ಡಿ, ವೈದ್ಯ ಹಾದಿಮನಿ ದಾವಣಗೇರೆ, ಹರೀಶ್ ಸಾಮುಗ್, ಗೋಪಾಲಕೃಷ್ಣ, ವಿಶ್ವನಾಥ್ ಕಾಂಬಳೆ, ಮಲ್ಲಿಕಾರ್ಜುನಯ್ಯ, ವೈದ್ಯೆ ಸವಿತಾ ಧಾರವಾಡ್, ಬಸವರಾಜ್ ಗೋರನಳ್ಳಿ, ವೈದ್ಯ ಲಿಂಗಪ್ಪ ಮಡಿವಾಳ್, ಮಹಾರುದ್ರ ಡಾಕುಳಗೆ ಹಾಗೂ ಶಿವಶರಣಪ್ಪ ಗಣೇಶಪುರ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X