ಬೀದರ್ | ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕ, ಬಾಲಕಿಯರ ವಿದ್ಯಾಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೀದರ್ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬಾಲಕ ಮತ್ತು ಬಾಲಕಿಯರ ವಿದ್ಯಾಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಹಾಗೂ ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ, ಪ.ಪಂಗಡ ಮತ್ತು ಇತರೆ ಜನಾಂಗಗಳಿಗೆ ಸೇರಿದ ಸಾಮಾನ್ಯ ಪದವಿ ಕೋರ್ಸಿನ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿಗಳಿಗೆ 2026-27ನೇ ಸಾಲಿನ ವಸತಿ ನಿಲಯ ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳು https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಜು.20ರ ಒಳಗಾಗಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story




