Bidar | ಜೂ. 29ರಂದು ಬಂಜಾರಾ ಸಮಾಜದ ಜನಜಾಗೃತಿ ಸಮಾವೇಶ : ಶಾಸಕ ಪ್ರಭು ಚವ್ಹಾಣ

ಬೀದರ್ : ಒಳ ಮೀಸಲಾತಿಯ ಅವೈಜ್ಞಾನಿಕ ಹಂಚಿಕೆಯ ಮೂಲಕ ಬಂಜಾರಾ ಸಮಾಜಕ್ಕೆ ಅನ್ಯಾಯ ಎಸಗಿರುವ ರಾಜ್ಯ ಸರ್ಕಾರದ ವಿರುದ್ಧ ಜೂ. 29ರ ಬೆಳಗ್ಗೆ 11:30 ಗಂಟೆಗೆ ನಗರದ ಝೀರಾ ಫಂಕ್ಷನ್ ಹಾಲ್ ನಲ್ಲಿ ಬಂಜಾರಾ ಸಮಾಜದಿಂದ ಬೃಹತ್ ಜನಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಪ್ರಭು ಚವ್ಹಾಣ್ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಜೂ.29 ರಂದು ಬೆಳಗ್ಗೆ ಜಿಲ್ಲಾ ಬಂಜಾರಾ ಭವನದ ಹತ್ತಿರದ ಮಾತಾ ಜಗದಂಬಾ ಹಾಗೂ ಸಂತ ಸೇವಾಲಾಲ್ ಮಹಾರಾಜರ ಮಂದಿರದಿಂದ ಝೀರಾ ಪಂಕ್ಷನ್ ಹಾಲ್ ವರೆಗೆ ಪಾದಯಾತ್ರೆ ಮೂಲಕ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜನಜಾಗೃತಿ ಸಮಾವೇಶ ಆರಂಭಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಮಾಜಿ ಶಾಸಕ ಪಿ.ರಾಜೀವ್, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಹೂವಿನ ಹಡಗಲಿ ಶಾಸಕ ಕೃಷ್ಣಾ ನಾಯಕ್, ಬಸವಕಲ್ಯಾಣ ಶಾಸಕ ಶರಣು ಸಲಗರ್, ಹುಮನಾಬಾದ್ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್, ಚಿಂಚೋಳಿ ಶಾಸಕ ಅವಿನಾಶ್ ಜಾಧವ್, ಮಾಜಿ ಸಂಸದ ಉಮೇಶ್ ಜಾಧವ್, ವಿಧಾನ ಪರಿಷತ್ತಿನ ಮಾಜಿ ಸಭಾಪತಿ ರಘುನಾಥರಾವ್ ಮಲ್ಕಾಪೂರೆ, ಸುಭಾಷ್ ಕಲ್ಲೂರ್, ಮಾಜಿ ಶಾಸಕ ಪ್ರಕಾಶ್ ಖಂಡ್ರೆ, ಈಶ್ವರಸಿಂಗ್ ಠಾಕೂರ್, ಬಂಜಾರಾ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ್ ಪವಾರ್ ಸೇರಿದಂತೆ ಪಕ್ಷದ ಮುಖಂಡರು, ಸಮಾಜದ ಗಣ್ಯರು ಈ ಸಮಾವೇಶದಲ್ಲಿ ಭಾಗವಹಿಸುವರು. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.






