ಬೀದರ್ | ಮೇ 18 ರಂದು ಬಸವಣ್ಣನವರ ಮೂರ್ತಿ ಅನಾವರಣ

ಬೀದರ್ : ಮೇ 18 ರಂದು ಬಸವಣ್ಣನವರ ಮೂರ್ತಿ ಅನಾವರಣ ಹಾಗೂ ಬಸವ ಜಯಂತಿ ಕಾರ್ಯಕ್ರಮವು ಬೀದರ್ ತಾಲ್ಲೂಕಿನ ಸಂಗೋಳಗಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಗ್ರಾಮದ ಬಸವ ಜಯಂತಿ ಉತ್ಸವ ಸಮಿತಿ ವತಿಯಿಂದ ಮೇ 10 ರಿಂದ 17ರವರೆಗೆ ಪ್ರತಿದಿನ ಸಾಯಂಕಾಲ 7 ರಿಂದ 8:30 ಗಂಟೆ ವರೆಗೆ ಖ್ಯಾತ ಪ್ರವಚನಗಾರ್ತಿ ಬಸವಗೀತಾ ತಾಯಿ ಅವರಿಂದ ಬಸವ ದರ್ಶನ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ.
ಮೇ 18 ರ ಸಾಯಂಕಾಲ 5 ಗಂಟೆಗೆ ಬಸವ ಜಯಂತಿ ಉತ್ಸವ ಹಾಗೂ ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬಸವ ದರ್ಶನ ಪ್ರವಚನ ಹಾಗೂ ಬಸವಣ್ಣನವರ ಮೂರ್ತಿ ಅನಾವರಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
Next Story





