Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಶಾಸಕ ಪ್ರಭು ಚವ್ಹಾಣ್‌ ವಿರುದ್ಧ...

Bidar | ಶಾಸಕ ಪ್ರಭು ಚವ್ಹಾಣ್‌ ವಿರುದ್ಧ ಆಧಾರರಹಿತ ಆರೋಪ: ದೀಪಕ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಎಚ್ಚರಿಕೆ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ27 Nov 2026 7:33 PM IST
share
Bidar | ಶಾಸಕ ಪ್ರಭು ಚವ್ಹಾಣ್‌ ವಿರುದ್ಧ ಆಧಾರರಹಿತ ಆರೋಪ: ದೀಪಕ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಎಚ್ಚರಿಕೆ

ಬೀದರ್: ಔರಾದ್ ಶಾಸಕ ಪ್ರಭು ಚವ್ಹಾಣ್‌ ಅವರ ಘನತೆ ಮತ್ತು ಗೌರವಕ್ಕೆ ಪದೇಪದೇ ಧಕ್ಕೆ ತರುವ ಉದ್ದೇಶದಿಂದ ಅಸತ್ಯ ಹಾಗೂ ಆಧಾರರಹಿತ ಆರೋಪಗಳನ್ನು ಮಾಡುತ್ತಿರುವ ಚಾಂದೋರಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲಾಗುವುದು ಎಂದು ಸುಜಿತ್ ರಾಠೋಡ್ ಪ್ರಕಟಣೆ ಮೂಲಕ ಎಚ್ಚರಿಸಿದ್ದಾರೆ.

ಬೀದರ್ ಸಮೀಪದ ಕೊಳಾರ್ ಗ್ರಾಮದ ಬಳಿಯ ಜಮೀನಿಗೆ ಸಂಬಂಧಿಸಿದಂತೆ ಶಾಸಕರು ಭೂ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿರುವುದು ಖಂಡನೀಯವಾಗಿದೆ. ಈ ಜಮೀನಿನ ಖರೀದಿ ವ್ಯವಹಾರ 2007ರಲ್ಲಿಯೇ ಆರಂಭವಾಗಿದ್ದು, 2008ರಲ್ಲಿ ಖರೀದಿಸಲಾಗಿದೆ. ಈ ಜಮೀನು 1954ರಿಂದಲೂ ಪಟ್ಟಾ ಜಮೀನಾಗಿದ್ದು, ಈ ಹಿಂದೆ ಏಳರಿಂದ ಎಂಟು ಜನರು ಮಾಲೀಕತ್ವ ಹೊಂದಿದ್ದರು. ನಂತರ ಶಾಸಕರು ಅದನ್ನು ಖರೀದಿಸಿದ್ದಾರೆ. ಖರೀದಿ ವ್ಯವಹಾರದ ಸಂದರ್ಭದಲ್ಲಿ ಅವರು ಶಾಸಕರಾಗಿರಲಿಲ್ಲ. ಹೀಗಿರುವಾಗ ಅಧಿಕಾರ ದುರ್ಬಳಕೆಯ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶಾಸಕರ ಹೆಸರಿಗೆ ಮಸಿ ಬಳಿಯುವ ಏಕೈಕ ಉದ್ದೇಶದಿಂದ ಇದನ್ನು ಭೂ ಕಬಳಿಕೆ ಎಂದು ಬಿಂಬಿಸಲಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಜಿಲ್ಲೆಯಲ್ಲಿ ಜಮೀನುಗಳಿಗೆ ಸಂಬಂಧಿಸಿದಂತೆ ಸಾವಿರಾರು ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿವೆ. ಪಹಣಿ ಹಾಗೂ ಇತರ ಜಮೀನು ದಾಖಲೆಗಳಲ್ಲಿನ ಲೋಪದೋಷಗಳಿಂದ ಅನೇಕ ರೈತರು ಸಮಸ್ಯೆ ಎದುರಿಸುತ್ತಿದ್ದಾರೆ. ದಾಖಲೆಗಳ ನಿರ್ವಹಣೆಯಲ್ಲಿ ತಪ್ಪುಗಳಿದ್ದ ಮಾತ್ರಕ್ಕೆ ಜಮೀನಿನ ಮಾಲೀಕರು ಅಪರಾಧಿಗಳಾಗುವುದಿಲ್ಲ. ಈ ಜಮೀನಿಗೆ ಸಂಬಂಧಿಸಿದ 1954-55ನೇ ಸಾಲಿನ ಖಾಸ್ರಾ ಪಹಣಿ, ಪಕ್ಕಾ ಪುಸ್ತಕ, ಪ್ರತಿ ಪುಸ್ತಕ ಹಾಗೂ ಹೊಸ ಪಹಣಿಗಳನ್ನು ಸಲ್ಲಿಸಲು ಸಿದ್ಧರಿದ್ದೇವೆ. ಜನರಿಗೆ ಎಲ್ಲವೂ ತಿಳಿದಿದ್ದು, ಇಂತಹ ಪ್ರಯತ್ನಗಳಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಹೇಳಿದ್ದಾರೆ.

ಇದೇ ಜಮೀನಿಗೆ ಸಂಬಂಧಿಸಿದಂತೆ ಈ ಹಿಂದೆ ಅಧಿಕಾರಿಗಳ ಮೇಲೆ ಒತ್ತಡ ಹೇರಿ, ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಇಡೀ ಪಹಣಿಯನ್ನೇ ತೆಗೆಸುವ ಪ್ರಯತ್ನ ಮಾಡಲಾಗಿತ್ತು. ಹೈಕೋರ್ಟ್ ಸರಿಪಡಿಸಲು ನಿರ್ದೇಶನ ನೀಡಿದ ಬಳಿಕ ಅದನ್ನು ಸರಿಪಡಿಸಲಾಯಿತು. ಈ ವ್ಯಕ್ತಿ ಶಾಸಕರ ವಿರುದ್ಧ ಹಲವು ದೂರುಗಳನ್ನು ಸಲ್ಲಿಸಿದ್ದಾರೆ. ತಾವೇ ಕೆಲವು ದೂರುಗಳನ್ನು ನೀಡಿದರೆ, ತಮ್ಮ ಗುಂಪಿನವರಿಂದಲೂ ಇನ್ನು ಕೆಲವು ದೂರುಗಳನ್ನು ಸಲ್ಲಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ದೀಪಕ್ ಪಾಟೀಲ್ ಅವರ ಹಿಂದಿನ ನಡೆಗಳು ಅಕ್ರಮ, ಮೋಸ ಮತ್ತು ವಂಚನೆಯಿಂದ ಕೂಡಿವೆ. ಎಲ್ಲೆಲ್ಲಿ ಹೋಗಿದ್ದಾರೋ ಅಲ್ಲೆಲ್ಲ ವಿಶ್ವಾಸದ್ರೋಹದ ಕೆಲಸ ಮಾಡಿದ್ದಾರೆ. ಶಾಸಕ ಪ್ರಭು ಚವ್ಹಾಣ ಅವರೊಂದಿಗೂ ಗುರುತಿಸಿಕೊಂಡು, ಅವರಿಂದ ಸಾಕಷ್ಟು ಪ್ರಯೋಜನ ಪಡೆದು, ಬಳಿಕ ಅವರ ವಿರುದ್ಧವೇ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ರಾಜಕೀಯ ಅಥವಾ ವೈಯಕ್ತಿಕ ದ್ವೇಷದಿಂದ ಆಧಾರರಹಿತ ಆರೋಪಗಳನ್ನು ಮಾಡಿ ಶಾಸಕ ಪ್ರಭು ಚವ್ಹಾಣ ಅವರ ಘನತೆಗೆ ಧಕ್ಕೆ ತರುವುದನ್ನು ಇನ್ನು ಮುಂದೆ ಸಹಿಸುವುದಿಲ್ಲ. ಅವರ ಘನತೆ ಮತ್ತು ಪ್ರತಿಷ್ಠೆಗೆ ಧಕ್ಕೆ ತರುವವರ ವಿರುದ್ಧ ಕಾನೂನುಬದ್ಧ ಹೋರಾಟ ನಡೆಸಲಾಗುವುದು. ಮಾನಹಾನಿ ಹಾಗೂ ನಷ್ಟ ಪರಿಹಾರ ಕೋರಿ ನ್ಯಾಯಾಲಯದ ಮೊರೆ ಹೋಗಲಾಗುವುದು ಎಂದು ಸುಜಿತ್ ರಾಠೋಡ್ ಸ್ಪಷ್ಟಪಡಿಸಿದ್ದಾರೆ.

Tags

BidarPrabhu Chavan
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X