ಬೀದರ್ | ಭಾಲ್ಕಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಅಮಾನತುಗೊಳಿಸುವಂತೆ ಪ್ರಜಾಪ್ರಭುತ್ವ ಸಂರಕ್ಷಣಾ ವೇದಿಕೆ ಮನವಿ

ಬೀದರ್ : ಭಾಲ್ಕಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾಪ್ರಭುತ್ವ ಸಂರಕ್ಷಣಾ ವೇದಿಕೆಯಿಂದ ಮನವಿ ಪತ್ರ ಸಲ್ಲಿಸಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಶನಿವಾರ ಸಲ್ಲಿಸಿದ ಮನವಿಯಲ್ಲಿ, ಭಾಲ್ಕಿ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬಂದಾಗಿನಿಂದ ಕೆಲ ಅಂಗನವಾಡಿಗಳಲ್ಲಿ ಕುಡಿಯಲು ಸರಿಯಾದ ನೀರಿಲ್ಲದೆ ಮಕ್ಕಳು ಪರದಾಡುತ್ತಿದ್ದಾರೆ. ಕಳಪೆ ಮಟ್ಟದ ಆಹಾರ, ಮೊಟ್ಟೆ ನೀಡಿ ಸರಕಾರದ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಭಾಲ್ಕಿ ತಾಲೂಕಿನ ಹಲವಾರು ಅಂಗನವಾಡಿಗಳಲ್ಲಿ ಮಕ್ಕಳೇ ಇಲ್ಲ. ಅಂತಹ ಕಡೆಗಳಲ್ಲೂ ಮಕ್ಕಳು ಇದ್ದಾರೆಂದು ಭೋಗಸ್ ಬಿಲ್ಲುಗಳನ್ನು ನೀಡಿ ಸರಕಾರದ ಕಣ್ಣಿಗೆ ಮಣ್ಣೆರಚುವ ಕೆಲಸ ನಡೆಯುತ್ತಿದೆ. ಆದ್ದರಿಂದ ಈ ಬಗ್ಗೆ ಕೂಲಂಕುಶವಾಗಿ ತನಿಖೆ ಮಾಡಿ ಕ್ರಮವನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಪ್ರಜಾಪ್ರಭುತ್ವ ಸಂರಕ್ಷಣಾ ವೇದಿಕೆಯ ಸಂಸ್ಥಾಪಕ ರಾಜ್ಯಾಧಕ್ಷ ಗಗನ್ ಫುಲೆ, ಧರ್ಮೇಶ್ ಹಾಗೂ ಜೈವರ್ಧನ್ ಉಪಸ್ಥಿತರಿದ್ದರು.




