Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವಿದ್ಯುತ್ ಅವಘಡ ತಡೆಗೆ ಕ್ರಮ...

Bidar | ವಿದ್ಯುತ್ ಅವಘಡ ತಡೆಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ: ಭೀಮ್ ಆರ್ಮಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ24 July 2026 9:37 PM IST
share
Bidar | ವಿದ್ಯುತ್ ಅವಘಡ ತಡೆಗೆ ಕ್ರಮ ಕೈಗೊಳ್ಳದಿದ್ದರೆ ಹೋರಾಟ: ಭೀಮ್ ಆರ್ಮಿ ಎಚ್ಚರಿಕೆ

ಬೀದರ್: ಜಿಲ್ಲೆಯಲ್ಲಿ ವಿದ್ಯುತ್ ತಂತಿ ಕಳಚಿ ಬಿದ್ದು ಸಂಭವಿಸುತ್ತಿರುವ ಅವಘಡಗಳಿಂದ ಬಡ ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಳ್ಳುತ್ತಿರುವ ಘಟನೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೆಸ್ಕಾಂ ಇಲಾಖೆ ತಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜೆಸ್ಕಾಂ ಕಚೇರಿ ಎದುರು ಉಗ್ರ ಹೋರಾಟ ನಡೆಸಲಾಗುವುದು ಎಂದು ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ಎಚ್ಚರಿಕೆ ನೀಡಿದೆ.

ಈ ಕುರಿತು ಜೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದ ಸಂಘಟನೆಯ ಮುಖಂಡರು, ಜಿಲ್ಲೆಯಲ್ಲಿ ವಿದ್ಯುತ್ ಕಂಬಗಳು, ತಂತಿಗಳು ಹಾಗೂ ಇನ್ಸುಲೇಟರ್‌ಗಳು ಶಿಥಿಲಗೊಂಡಿರುವುದರಿಂದ ನಿರಂತರವಾಗಿ ಅವಘಡಗಳು ಸಂಭವಿಸುತ್ತಿದ್ದು, ಇದಕ್ಕೆ ಇಲಾಖೆಯ ನಿರ್ಲಕ್ಷ್ಯವೇ ಕಾರಣವಾಗಿದೆ ಎಂದು ಆರೋಪಿಸಿದರು.

ಇತ್ತೀಚೆಗೆ ಬೀದರ್ ದಕ್ಷಿಣ ಕ್ಷೇತ್ರದ ಮನ್ನಳ್ಳಿ ಗ್ರಾಮದಲ್ಲಿ ವಿದ್ಯುತ್ ತಂತಿ ಕಳಚಿ ಬಿದ್ದ ಪರಿಣಾಮ ದಲಿತ ಕುಟುಂಬದ ದಂಪತಿ ಮೃತಪಟ್ಟಿದ್ದರು. ಭಾಲ್ಕಿ ತಾಲೂಕಿನ ಮಳಚಾಪೂರ್, ಕಮಠಾಣ, ಮದಕಟ್ಟಿ, ಅಂಬೇಸಾಂಗವಿ ಹಾಗೂ ಹುಮನಾಬಾದ್ ತಾಲೂಕಿನ ಉಡಮನಳ್ಳಿ ಗ್ರಾಮಗಳಲ್ಲಿಯೂ ವಿದ್ಯುತ್ ಅವಘಡಗಳಿಗೆ ಹಲವು ಬಡ ಕೂಲಿ ಕಾರ್ಮಿಕರು ಬಲಿಯಾಗಿರುವುದನ್ನು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಹಳೆಯ ವಿದ್ಯುತ್ ಕಂಬಗಳು, ಶಿಥಿಲಗೊಂಡ ತಂತಿಗಳು ಹಾಗೂ ದುರಸ್ತಿಗೆ ಒಳಪಡದ ಇನ್ಸುಲೇಟರ್‌ಗಳನ್ನು ತಕ್ಷಣ ಬದಲಾಯಿಸಬೇಕು. ಹಿರಿಯ ಅಧಿಕಾರಿಗಳು ನಿರಂತರ ಪರಿಶೀಲನೆ ನಡೆಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದರೆ ಮಾತ್ರ ಇಂತಹ ಅವಘಡಗಳನ್ನು ತಡೆಯಲು ಸಾಧ್ಯ ಎಂದು ಒತ್ತಾಯಿಸಿದರು.

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೆ ಇಲಾಖೆಯ ನಿರ್ಲಕ್ಷ್ಯ ಮುಂದುವರಿದರೆ ಜೆಸ್ಕಾಂ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಇಂಡಿಯನ್ ನ್ಯಾಷನಲ್ ಭೀಮ್ ಆರ್ಮಿ ಎಚ್ಚರಿಕೆ ನೀಡಿದೆ.

ಈ ಸಂದರ್ಭದಲ್ಲಿ ಸಂಸ್ಥಾಪಕ ರಾಜ್ಯಾಧ್ಯಕ್ಷ ದೀಲಿಪಕುಮಾರ್ ವರ್ಮಾ, ರಾಜ್ಯ ಉಪಾಧ್ಯಕ್ಷ ಅಶೋಕ್ ಭಾವಿದೊಡ್ಡಿ, ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜಶೇಖರ್ ಶೇರಿಕಾರ್, ಬೀದರ್ ದಕ್ಷಿಣ ತಾಲೂಕು ಅಧ್ಯಕ್ಷ ಶ್ರೀಕಾಂತ್ ಸಾಗರ್, ಸದಸ್ಯ ಮಿಥುನ್ ವರ್ಮಾ, ಜಿಲ್ಲಾ ಗೌರವಾಧ್ಯಕ್ಷ ವಿಜಯಕುಮಾರ್ ಮೇತ್ರೆ, ಬೀದರ್ ದಕ್ಷಿಣ ತಾಲೂಕು ಉಪಾಧ್ಯಕ್ಷ ಅನೀಲಕುಮಾರ್ ಬಾಜಿ ಹಾಗೂ ಯುವ ಮುಖಂಡ ಸಂದೀಪ್ ಕಟ್ಟಿಮನಿ ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X