Bidar | ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು

ಬೀದರ್ : ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಬೋರ್ ವೆಲ್ ಕೊರೆಯುವ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಕೇಸರ ಜವಳಗಾ ಗ್ರಾಮದ ಬಳಿ ಶನಿವಾರ ರಾತ್ರಿ ಸಂಭವಿಸಿದೆ.
ಮೆಹಕರ್ ಗ್ರಾಮದ ನಿವಾಸಿ ಗಣೇಶ್ ವಳಂಡೆ (25) ಮೃತಪಟ್ಟವರು.
ಗಣೇಶ್ ಭಾಲ್ಕಿಯಲ್ಲಿ ನಡೆದ ಆರೆಸ್ಸೆಸ್ ಪಥ ಸಂಚಲನದಲ್ಲಿ ಭಾಗವಹಿಸಿ ಬೈಕಿನಲ್ಲಿ ತನ್ನ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕೇಸರ ಜವಳಗಾ ಮತ್ತು ಪಾಂಡರಿ ಗ್ರಾಮಗಳ ಮಧ್ಯದ ರಸ್ತೆ ಮಧ್ಯೆ ಕೆಟ್ಟು ನಿಂತಿದ್ದ ಬೋರ್ ವೆಲ್ ಲಾರಿಗೆ ಬೈಕ್ ಢಿಕ್ಕಿ ಹೊಡೆದಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಗಣೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
Next Story




