Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಆದಿವಾಸಿಗಳ ಹಕ್ಕುಗಳಿಗಾಗಿ...

Bidar | ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ ಬಿರ್ಸಾ ಮುಂಡಾ: ಮಾಣಿಕ ನೇಳಗಿ

ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ16 Nov 2026 6:32 PM IST
share
Bidar | ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡಿದ ಬಿರ್ಸಾ ಮುಂಡಾ: ಮಾಣಿಕ ನೇಳಗಿ

ಬೀದರ್: ಆದಿವಾಸಿಗಳು ಈ ದೇಶದ ಮೂಲನಿವಾಸಿಗಳಾಗಿದ್ದು, ನೆಲ, ಜಲ ಮತ್ತು ಕಾಡನ್ನು ದೇವರೆಂದು ಪೂಜಿಸುವುದರ ಜೊತೆಗೆ ಅವುಗಳೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾರೆ ಎಂದು ಸಾಹಿತಿ ಮಾಣಿಕ ನೇಳಗಿ ಹೇಳಿದರು.

ನಗರದ ಬೊಮಗೊಂಡೇಶ್ವರ ವೃತ್ತದಲ್ಲಿ ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ತು ಹಾಗೂ ಆದಿವಾಸಿ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಧರ್ತಿ ಆಬಾ ಬಿರ್ಸಾ ಮುಂಡಾ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಬ್ರಿಟಿಷರು ಕಾಡಿನ ಸಂಪನ್ಮೂಲಗಳ ಬಳಕೆಗೆ ನಿರ್ಬಂಧ ಹೇರಿದಾಗ, ಬಿರ್ಸಾ ಮುಂಡಾ ಅವರು ಬ್ರಿಟಿಷರ ವಿರುದ್ಧ ಹೋರಾಡಿ ಆದಿವಾಸಿಗಳ ಹಕ್ಕುಗಳಿಗಾಗಿ ದಂಗೆ ಎದ್ದ ವೀರಪುರುಷರಾಗಿದ್ದಾರೆ ಎಂದು ಹೇಳಿದರು.

ಆದಿವಾಸಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ್ ಡುಮ್ಮೆ ಮಾತನಾಡಿ, ದೇಶದ ಆದಿವಾಸಿಗಳ ಪಾಲಿನ ಭಗವಾನ್ ಎಂದೇ ಖ್ಯಾತರಾದ ಬಿರ್ಸಾ ಮುಂಡಾ ಅವರು ತಮ್ಮ ಕೇವಲ 25 ವರ್ಷಗಳ ಜೀವಿತಾವಧಿಯಲ್ಲಿ ಕ್ರಾಂತಿಕಾರಿ ಉಲ್ಗುಲಾನ್ ಚಳವಳಿಯ ಮೂಲಕ ಆದಿವಾಸಿಗಳನ್ನು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಶೈಕ್ಷಣಿಕವಾಗಿ ಒಗ್ಗೂಡಿಸಿದರು ಎಂದರು.

ಬ್ರಿಟಿಷರ ವಿರುದ್ಧ ಹೋರಾಡಿ ಆದಿವಾಸಿಗಳ ಮೂಲಭೂತ ಹಕ್ಕುಗಳಾದ ಜಲ್, ಜಂಗಲ್ ಮತ್ತು ಜಮೀನ್‌ಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಹೋರಾಟಗಾರರಾಗಿದ್ದಾರೆ. ಇಂತಹ ಮಹಾನ್ ಚೇತನಕ್ಕೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಆದಿವಾಸಿಗಳ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಶಿಕ್ಷಣ ಪಡೆಯಬೇಕು. ಆ ಮೂಲಕ ಸುಂದರ ಬದುಕು ರೂಪಿಸಿಕೊಳ್ಳಬೇಕು. ಬಿರ್ಸಾ ಮುಂಡಾ ಅವರ ಆದರ್ಶ ಹಾಗೂ ಸಿದ್ಧಾಂತಗಳನ್ನು ಮುಂದಿನ ಪೀಳಿಗೆಗೆ ಪಸರಿಸುವುದರೊಂದಿಗೆ ನಾಡಿನ ಮಾದರಿ ವ್ಯಕ್ತಿಗಳಾಗಿ ಬೆಳೆಯಬೇಕು ಎಂದು ಕರೆ ನೀಡಿದರು.

ಅಖಿಲ ಭಾರತೀಯ ಗೊಂಡ ಆದಿವಾಸಿ ಸಂಘದ ಪ್ರಧಾನ ಕಾರ್ಯದರ್ಶಿ ಮಾಳಪ್ಪ ಅಡಸಾರೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗೊಂಡ ನೌಕರರ ಸಂಘದ ಕುಶಾಲರಾವ್ ಯರನಳ್ಳಿ, ಗೊಂಡ ನಿವೃತ್ತ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಲ್ಯಾಣರಾವ್ ಅಡಸಾರೆ, ಬಾಬುರಾವ್ ಗೊಂಡ, ಜಗನ್ನಾಥ ಜಂಬಗಿ, ಬೀರಪ್ಪ ಜಂಬಗಿ, ಬಳವಂತರಾವ್ ರಾಠೋಡ್, ದತ್ತು ಕಾಡವಾದ್, ಸಂತೋಷ್ ಬಗದಲ್, ಬಸವರಾಜ್ ಕಮಠಾಣ, ಟೋಕರೆ ಕೋಳಿ ಸಮಾಜದ ಯುವ ಮುಖಂಡ ಸಂಜೀವಕುಮಾರ್ ಕೋಳಿ ಹಾಗೂ ಪಂಢರಿ ನೇಳಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

AdivasiBirsa MundaBidar
share
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ
ಚಿತ್ರಸೇನ ವ್ಹಿ ಫುಲೆ/ವಾರ್ತಾಭಾರತಿ

ಚಿತ್ರಶೇನ ವ್ಹಿ. ಫುಲೆ ಅವರು 2023ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದ್ದಾರೆ. 2025ರಿಂದ ವಾರ್ತಾಭಾರತಿ ಪತ್ರಿಕೆಯ ಮೂಲಕ ಮಾಧ್ಯಮ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಿರುವ ಇವರು, ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಬೀದರ್ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ

Next Story
X