Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕಾಂಗ್ರೆಸ್‌ ನಡೆಯನ್ನು ಖಂಡಿಸಿ...

Bidar | ಕಾಂಗ್ರೆಸ್‌ ನಡೆಯನ್ನು ಖಂಡಿಸಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ24 July 2026 9:34 PM IST
share
Bidar | ಕಾಂಗ್ರೆಸ್‌ ನಡೆಯನ್ನು ಖಂಡಿಸಿ ಬಿಜೆಪಿ ಪಕ್ಷದಿಂದ ಪ್ರತಿಭಟನೆ

ಬೀದರ್: ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಘಟನೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದ ಎದುರು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಗಣೇಶ್ ಮೈದಾನದಿಂದ ಹರಳಯ್ಯ ವೃತ್ತ, ಮಡಿವಾಳೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದ ಮಾರ್ಗವಾಗಿ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಹಾಗೂ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಈಶ್ವರ್ ಖಂಡ್ರೆ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು.

ಪ್ರತಿಭಟನೆಯ ಬಳಿಕ ಮಾಜಿ ಸಂಸದ ಭಗವಂತ ಖೂಬಾ ಮಾತನಾಡಿ, ಕಾಂಗ್ರೆಸ್ ರಾಜಕೀಯ ಲಾಭಕ್ಕಾಗಿ ವಿದ್ಯಾರ್ಥಿಗಳನ್ನು ಬಳಸಿಕೊಂಡು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ ಎಂದು ಆರೋಪಿಸಿದರು. ಇಂತಹ ನಡೆ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.

ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರ ಮೇಲೆ ಮೊಟ್ಟೆ ಎಸೆದ ಘಟನೆ ಖಂಡನೀಯವಾಗಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆರೋಪಿಸಿದರು.

ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಕೇಂದ್ರ ಸರ್ಕಾರ ಈಗಾಗಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡಿದ್ದು, ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಅಭಿವೃದ್ಧಿಯತ್ತ ಸಾಗುತ್ತಿದ್ದು, ಯುವಜನತೆ ಕೇಂದ್ರ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ ಬೆಂಬಲ ನೀಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿಯ ಜಿಲ್ಲಾದ್ಯಕ್ಷ ಸೊಮನಾಥ್‌ ಪಾಟೀಲ್‌, ಮಾಜಿ ಶಾಸಕ ಪ್ರಕಾಶ್‌ ಖಂಡ್ರೆ, ಈಶ್ವರ್‌ಸಿಂಗ್ ಠಾಕೂರ್, ಶಶಿ ಹೊಸಳ್ಳಿ ಸೇರಿದಂತೆ ನೂರಾರು ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

Tags

protestBJPBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X