Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬೀದಿ ವ್ಯಾಪಾರಿಗಳ ಶುಲ್ಕ...

Bidar | ಬೀದಿ ವ್ಯಾಪಾರಿಗಳ ಶುಲ್ಕ ಹೆಚ್ಚಳ ಖಂಡಿಸಿ ಬಿಜೆಪಿ ಪ್ರತಿಭಟನೆ

ಬಡ ವ್ಯಾಪಾರಿಗಳ ಮೇಲೆ ಹೆಚ್ಚುವರಿ ಶುಲ್ಕದ ಹೊರೆ ಹಾಕಬೇಡಿ : ಸೋಮನಾಥ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ24 Aug 2026 6:11 PM IST
share
Bidar | ಬೀದಿ ವ್ಯಾಪಾರಿಗಳ ಶುಲ್ಕ ಹೆಚ್ಚಳ ಖಂಡಿಸಿ ಬಿಜೆಪಿ ಪ್ರತಿಭಟನೆ

ಬೀದರ್: ಬೀದಿ ವ್ಯಾಪಾರಿಗಳಿಂದ ನಗರ ಪಾಲಿಕೆ ವಸೂಲಿ ಮಾಡುತ್ತಿದ್ದ ಶುಲ್ಕವನ್ನು 20 ರೂ. ನಿಂದ 60 ರೂ. ಗೆ ಏರಿಸಿರುವುದನ್ನು ವಿರೋಧಿಸಿ ಭಾರತೀಯ ಜನತಾ ಪಕ್ಷದ ವತಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಗಣೇಶ್ ಮೈದಾನದಿಂದ ಮಹಾನಗರ ಪಾಲಿಕೆ ಕಚೇರಿವರೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ, ಶುಲ್ಕ ಹೆಚ್ಚಳವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸೋಮನಾಥ್ ಪಾಟೀಲ್, ಬಡ ಬೀದಿ ವ್ಯಾಪಾರಿಗಳಿಂದ ದಿನಕ್ಕೆ 60 ರೂ. ಶುಲ್ಕ ವಸೂಲಿ ಮಾಡುವುದು ಅನ್ಯಾಯವಾಗಿದೆ ಎಂದು ಹೇಳಿದರು. ಶುಲ್ಕ ವಸೂಲಿ ಮಾಡುವ ಅಧಿಕಾರ ಯಾರಿಗೆ ನೀಡಲಾಗಿದೆ, ಟೆಂಡರ್ ಪ್ರಕ್ರಿಯೆ ಹೇಗೆ ನಡೆದಿದೆ, ಎಷ್ಟು ಮೊತ್ತಕ್ಕೆ ಟೆಂಡರ್ ನೀಡಲಾಗಿದೆ ಹಾಗೂ ವ್ಯಾಪಾರಿಗಳಿಂದ ಎಷ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂಬುದನ್ನು ನಗರ ಪಾಲಿಕೆ ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ಕೇವಲ ಸಚಿವರೊಬ್ಬರನ್ನೇ ಈ ವಿಚಾರದಲ್ಲಿ ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ನಗರ ಪಾಲಿಕೆ ಅಧಿಕಾರಿಗಳಿಗೂ ಸಮಾನ ಜವಾಬ್ದಾರಿ ಇದೆ ಎಂದು ಅವರು ಆರೋಪಿಸಿದರು.

ಶುಲ್ಕ ವಸೂಲಿ ವ್ಯವಸ್ಥೆಯಲ್ಲಿ ಸಂಪೂರ್ಣ ಪಾರದರ್ಶಕತೆ ಇರಬೇಕು. ನಕಲಿ ರಸೀದಿ ಮೂಲಕ ಹಣ ವಸೂಲಿ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ವ್ಯಾಪಾರಿಗಳಿಂದ ಹಣ ಪಡೆಯುವಾಗ ಅಧಿಕೃತ ರಸೀದಿ ನೀಡುವುದರ ಜೊತೆಗೆ, ಸಾಧ್ಯವಾದರೆ ಕ್ಯೂಆರ್ ಕೋಡ್ ಮೂಲಕ ಡಿಜಿಟಲ್ ಪಾವತಿ ವ್ಯವಸ್ಥೆ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ನಗರದ ವಾಕಿಂಗ್ ಸ್ಟ್ರೀಟ್ ಸೇರಿದಂತೆ ವಿವಿಧ ವ್ಯಾಪಾರ ಪ್ರದೇಶಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕು. ವಾಹನ ಸಂಚಾರ ಮತ್ತು ವ್ಯಾಪಾರ ವ್ಯವಸ್ಥೆಯನ್ನು ಸಮರ್ಪಕವಾಗಿ ನಿರ್ವಹಿಸಿ, ವ್ಯಾಪಾರಿಗಳ ಜೀವನೋಪಾಯಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಬಡ ಬೀದಿ ವ್ಯಾಪಾರಿಗಳ ಮೇಲೆ ಹೆಚ್ಚುವರಿ ಶುಲ್ಕದ ಹೊರೆ ಹಾಕಬಾರದು. 60 ರೂ. ಶುಲ್ಕ ವಸೂಲಿ ಮಾಡುವ ಕ್ರಮವನ್ನು ಕೂಡಲೇ ಹಿಂಪಡೆಯಬೇಕು ಎಂದು ಆಗ್ರಹಿಸಿ ಬಳಿಕ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಶಶಿ ಹೊಸಳ್ಳಿ, ಬಾಬು ವಾಲಿ, ಈಶ್ವರ್‌ಸಿಂಗ್ ಠಾಕೂರ್, ಸುಭಾಷ್ ಮಡಿವಾಳ್, ಗಣೇಶ್ ಭೋಸ್ಲೆ, ಬಾಬು ಮಲ್ಕಾಪೂರೆ, ರೋಷನ್ ವರ್ಮಾ, ಪೀರಪ್ಪ ಔರಾದೆ, ಶ್ರೀನಿವಾಸ್ ಚೌದ್ರಿ, ರಾಜಶೇಖರ್ ನಾಗಮೂರ್ತಿ, ಹನಮಂತ್ ಬುಳ್ಳಾ, ದೀಪಕ್ ಗಾದಗೆ, ನರೇಶ್ ಗೌಳಿ, ಅಶೋಕ್ ಕರಂಜಿ, ನವೀನ್ ಚಿಟ್ಟಾ, ಗೊರಖನಾಥ್ ಗೌಳಿ, ನಿಲೇಶ್ ರಕ್ಷಾಳ್, ಮಲ್ಲಿಕಾರ್ಜುನ್ ನಂದಗಾಂವಕರ್, ಸಂಗಮೇಶ್, ಅಂಬರೀಷ್ ಕಾಮಠಾಣೆ, ಆತ್ಮರಾಮ್, ಬಸವ ಮುಲಗೆ, ವಿರೇಶ್ ಸ್ವಾಮಿ, ನಿರಂಜನ್, ಶಶಿಕಾಂತ್ ಹಾಗೂ ಜಗದೀಶ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು, ಬೀದಿಬದಿ ವ್ಯಾಪಾರಿಗಳು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X