Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಕೃಷ್ಣಮೃಗ ಬೇಟೆ ಪ್ರಕರಣ : ಆರು...

Bidar | ಕೃಷ್ಣಮೃಗ ಬೇಟೆ ಪ್ರಕರಣ : ಆರು ಮಂದಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ19 Aug 2026 6:57 PM IST
share
Bidar | ಕೃಷ್ಣಮೃಗ ಬೇಟೆ ಪ್ರಕರಣ : ಆರು ಮಂದಿಯ ಬಂಧನ
ರೈಫಲ್‌ ಬಂದೂಕು ಸೇರಿ ಎರಡು ವಾಹನ ವಶ

ಬೀದರ್: ಹೊನ್ನಿಕೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದ ಸಮೀಪದ ಚೊಂಡಿ–ಮಮದಾಪುರ ಗ್ರಾಮದ ಹುಲ್ಲುಗಾವಲಿನಲ್ಲಿ ಕೃಷ್ಣಮೃಗ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಆರು ಮಂದಿಯನ್ನು ಬಂಧಿಸಿದೆ. ಆರೋಪಿಗಳಿಂದ ಎರಡು ನಾಲ್ಕುಚಕ್ರ ವಾಹನಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ರೈಫಲ್‌ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

ಆ.17ರಂದು ಕೃಷ್ಣಮೃಗವನ್ನು ಬೇಟೆಯಾಡಿದ ಪ್ರಕರಣ ಬೆಳಕಿಗೆ ಬಂದಿದ್ದು, ಜೊಂಡಿ ತಾಂಡಾ ಹಾಗೂ ಮಮದಾಪುರ ತಾಂಡಾದ ಗ್ರಾಮಸ್ಥರು ಮೂವರು ಆರೋಪಿಗಳನ್ನು ಹಿಂಬಾಲಿಸಿ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ ಅವರನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿತ್ತು.

ಘಟನೆಯ ಬಳಿಕ ಪರಾರಿಯಾಗಿದ್ದ ಇನ್ನೂ ಮೂವರು ಆರೋಪಿಗಳ ಪತ್ತೆಗೆ ಅರಣ್ಯ ಇಲಾಖೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ಮಾರ್ಗದರ್ಶನದಲ್ಲಿ ಕಲಬುರಗಿ ಪೊಲೀಸರು, ಕಲಬುರಗಿ ವಿಭಾಗದ ಅರಣ್ಯ ಅಧಿಕಾರಿಗಳು ಹಾಗೂ ತೆಲಂಗಾಣ ಅರಣ್ಯ ಇಲಾಖೆ ಅಧಿಕಾರಿಗಳ ಸಹಕಾರದೊಂದಿಗೆ ಆ.18ರಂದು ಮೂವರನ್ನೂ ಬಂಧಿಸಲಾಗಿದೆ ಎಂದು ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮೀತ್ ಕುಮಾರ್ ಪಾಟೀಲ್ ತಿಳಿಸಿದ್ದಾರೆ.

ಬಸವಕಲ್ಯಾಣ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುನೀರ್ ಅಹ್ಮದ್ ನೇತೃತ್ವದಲ್ಲಿ ಬಸವಕಲ್ಯಾಣ ಆರ್‌ಎಫ್‌ಒ ಶಿವಕುಮಾರ್ ರಾಠೋಡ್, ಹುಮನಾಬಾದ್ ಆರ್‌ಎಫ್‌ಒ ಪವನಕುಮಾರ್ ಧೂಳೆ ಹಾಗೂ ಭಾಲ್ಕಿ ಡಿಆರ್‌ಎಫ್‌ಒ ಶಾಂತಕುಮಾರ್ ಅವರ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿತ್ತು.

ತೆಲಂಗಾಣ ಮೂಲದವರೂ ಭಾಗಿ :

ಪ್ರಾಥಮಿಕ ತನಿಖೆಯ ಪ್ರಕಾರ, ಪ್ರಕರಣದಲ್ಲಿ ಕಲಬುರಗಿ ಜಿಲ್ಲೆಯ ಜಂಬಗಿ ತಾಲೂಕಿನ ಮೂವರು ಸ್ಥಳೀಯರು ಹಾಗೂ ತೆಲಂಗಾಣದ ಹೈದರಾಬಾದ್ ಮೂಲದ ಮೂವರು ವ್ಯಕ್ತಿಗಳು ಭಾಗಿಯಾಗಿದ್ದಾರೆ ಎನ್ನಲಾಗಿದೆ. ವನ್ಯಜೀವಿ ಬೇಟೆಗೆ ಅತ್ಯಾಧುನಿಕ ಲಾಂಗ್‌ರೇಂಜ್ ರೈಫಲ್‌ಗಳನ್ನು ಬಳಸುತ್ತಿರುವ ಬಗ್ಗೆ ಮಾಹಿತಿ ದೊರೆತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದೆ.

ಆರೋಪಿಗಳ ವಿರುದ್ಧ WLOR-02/2026-27 ಪ್ರಕರಣ ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಬೀದರ್ ಆರ್‌ಎಫ್‌ಒ ಪ್ರವೀಣಕುಮಾರ್ ತನಿಖೆ ಮುಂದುವರಿಸಿದ್ದಾರೆ.

ಕೃಷ್ಣಮೃಗ ಬೇಟೆ ಕಾನೂನುಬಾಹಿರ :

ಕೃಷ್ಣಮೃಗವು ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972ರ ಶೆಡ್ಯೂಲ್–1 ಅಡಿಯಲ್ಲಿ ಸಂರಕ್ಷಿತ ವನ್ಯಜೀವಿಯಾಗಿದೆ. ಅದರ ಬೇಟೆ ಅಥವಾ ಹತ್ಯೆ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ವನ್ಯಜೀವಿ ಬೇಟೆ ಅಥವಾ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಕೂಡಲೇ ಸಮೀಪದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ.

Tags

blackbuckBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X