ಬೀದರ್ | ಮಾಂಜ್ರಾ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದ ಯುವಕನ ಮೃತದೇಹ ಪತ್ತೆ

ಬೀದರ್ : ಭಾಲ್ಕಿ ತಾಲೂಕಿನ ಹಲಸಿತೂಗಾಂವ್ ಗ್ರಾಮದ ಬಳಿ ಇರುವ ಮಾಂಜ್ರಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ಕೊಚ್ಚಿಕೊಂಡು ಹೋಗಿದ್ದ ಯುವಕನ ಮೃತದೇಹ ಶನಿವಾರ ಪತ್ತೆಯಾಗಿದೆ.
ಹಲಸಿತೂಗಾಂವ್ ಗ್ರಾಮದ ನಿವಾಸಿ ದಿಗಂಬರ ಸೂರ್ಯವಂಶಿ(21) ಮೃತಪಟ್ಟ ಯುವಕನಾಗಿದ್ದಾನೆ. ನವೆಂಬರ್ 16ರಂದು ತನ್ನ ಗೆಳೆಯರೊಂದಿಗೆ ಹಲಸಿತೂಗಾಂವ್ ಗ್ರಾಮದ ಬಳಿ ಇರುವ ಮಾಂಜ್ರಾ ನದಿಗೆ ಈಜಲು ತೆರಳಿದ್ದ ದಿಗಂಬರ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ. ಈ ಕುರಿತು ಮೆಹಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೃತದೇಹದ ಪತ್ತೆಗಾಗಿ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹುಡುಕಾಟ ನಡೆಸಿದ್ದರು. ಶನಿವಾರ ವಾಂಜರಖೇಡ್ ಗ್ರಾಮದ ಬಳಿಯ ಮಾಂಜ್ರಾ ನದಿ ನೀರಿನಲ್ಲಿ ಮೃತದೇಹ ಪತ್ತೆಯಾಗಿದೆ.
Next Story





