ಬೀದರ್ | ಬಸವಕಲ್ಯಾಣ ನಗರಸಭೆ ಪೌರಾಯುಕ್ತರನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಬಿಎಸ್‌ಪಿಯಿಂದ ಪ್ರತಿಭಟನೆ

ಬೀದರ್ : ಬಸವಕಲ್ಯಾಣ ನಗರಸಭೆ ಪೌರಾಯುಕ್ತ ರಾಜು ಡಿ.ಬನಕರ್ ಅವರು ಅವ್ಯವಹಾರ ನಡೆಸಿದ್ದು, ಅವರನ್ನು ಕೂಡಲೇ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಬಹುಜನ ಸಮಾಜ ಪಕ್ಷದ ವತಿಯಿಂದ ಬಸವಕಲ್ಯಾಣದ ಪೌರಾಯುಕ್ತ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಬಸವಕಲ್ಯಾಣದ ತಹಶೀಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ ಮನವಿ ಪತ್ರದಲ್ಲಿ, ಬಸವಕಲ್ಯಾಣದ ನಗರಸಭೆ ಪೌರಾಯುಕ್ತ ರಾಜು ಡಿ. ಬನಕರ್ ಅವರು ಭ್ರಷ್ಟಾಚಾರ ಮಾಡಿದ್ದಾರೆ. ಅವರನ್ನು ಅಮಾನತುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಬಿಎಸ್‌ಪಿ ಪಕ್ಷದ ರಾಜ್ಯ ಕಾರ್ಯದರ್ಶಿ ಅಶೋಕ್ ಬಿ.ಮಂಠಾಳಕರ್, ಜ್ಞಾನೇಶ್ವರ್ ಸಿಂಗಾರೆ, ಜಿಲ್ಲಾಧ್ಯಕ್ಷ ಕಪಿಲ್ ಗೋಡಬೋಲೆ, ಜಿಲ್ಲಾ ಉಪಾಧ್ಯಕ್ಷ ಸಚಿನ್ ಗಿರಿ, ತಾಲೂಕು ಅಧ್ಯಕ್ಷ ಶಂಕರ್ ಫುಲೆ, ವಿರಶೇಟ್ಟಿ ಮೂಲಗೆ, ಮಕ್ಬುಲ್ ಸಾಬ್, ರವಿ ಉದಾತೆ, ರಮೇಶ್ ರಾಠೋಡ್, ಸಚಿನ್ ಕಾಂಬಳೆ, ಮಹಾದೇವ್ ಹಾಗೂ ಚಂದ್ರಶಿಲ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Next Story





