Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬಿಎಸ್‌ಎಸ್‌ಕೆ ಸಕ್ಕರೆ...

Bidar | ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಮಾರಾಟ ತಡೆದು ಪುನರಾರಂಭಕ್ಕೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 Aug 2026 7:58 PM IST
share
Bidar | ಬಿಎಸ್‌ಎಸ್‌ಕೆ ಸಕ್ಕರೆ ಕಾರ್ಖಾನೆ ಮಾರಾಟ ತಡೆದು ಪುನರಾರಂಭಕ್ಕೆ ಆಗ್ರಹ

ಬೀದರ್: ಜಿಲ್ಲೆಯ ರೈತರ ಜೀವನಾಡಿಯಾಗಿರುವ ಹಳ್ಳಿಖೇಡ್ (ಬಿ)ಯ ಬಿಎಸ್‌ಎಸ್‌ಕೆ ಸಹಕಾರಿ ಸಕ್ಕರೆ ಕಾರ್ಖಾನೆಯನ್ನು ಮಾರಾಟ ಮಾಡದೆ, ಸರ್ಕಾರವೇ ವಹಿಸಿಕೊಂಡು ಪುನರಾರಂಭಿಸಬೇಕು ಎಂದು ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಬಿಎಸ್‌ಎಸ್‌ಕೆ ಕಾರ್ಮಿಕರ ಸಂಘ ಒತ್ತಾಯಿಸಿದೆ.

ಈ ಕುರಿತು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ, ಸಹಕಾರ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಂಗಳವಾರ ಮನವಿ ಸಲ್ಲಿಸಲಾಯಿತು. ಸಹಕಾರಿ ವಲಯದಲ್ಲಿ ರಾಜ್ಯದಲ್ಲೇ ಪ್ರಸಿದ್ಧಿ ಪಡೆದಿದ್ದ ಬಿಎಸ್‌ಎಸ್‌ಕೆ ಕಾರ್ಖಾನೆ ಬೀದರ್ ಜಿಲ್ಲೆಯ ರೈತರ ಪ್ರಮುಖ ಆಧಾರವಾಗಿದ್ದು, ಕಾರ್ಖಾನೆಯನ್ನು ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ಆದರೆ ಆಡಳಿತ ಮಂಡಳಿಯ ದುರಾಡಳಿತದಿಂದ ಸರ್ಕಾರದ ಅನುಮತಿಯಿಲ್ಲದೆ ಕಾರ್ಖಾನೆಯನ್ನು ಅಕ್ರಮವಾಗಿ ಮುಚ್ಚಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಕಾರ್ಖಾನೆಯ ಮೇಲೆ 241.44 ಕೋಟಿ ರೂ. ಮೂಲ ಸಾಲ ಹಾಗೂ 189.40 ಕೋಟಿ ರೂ. ಬಡ್ಡಿ ಸೇರಿದಂತೆ ಒಟ್ಟು 430.84 ಕೋಟಿ ರೂ. ಸಾಲವಿದೆ ಎಂದು ತಿಳಿಸಲಾಗಿದ್ದು, ಕಾರ್ಖಾನೆಯ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಲಾಗಿದೆ.

ಸಹಕಾರಿ ವಲಯದ ಬಿಎಸ್‌ಎಸ್‌ಕೆ ಕಾರ್ಖಾನೆಯನ್ನು ಮಾರಾಟ ಮಾಡಲು ಸಂಬಂಧಪಟ್ಟ ಸಂಸ್ಥೆ ನಿರ್ಧರಿಸಿರುವುದು ಖಂಡನೀಯ. ರೈತರ ಷೇರು ಹಣ ಹಾಗೂ ಕಾರ್ಖಾನೆಯ ಭೂಮಿಯನ್ನು ಪಟ್ಟಭದ್ರ ಹಿತಾಸಕ್ತಿಗಳು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದಾರೆ ಎಂದು ಆರೋಪಿಸಿರುವ ಸಂಘಟನೆಗಳು, ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಮಾರಾಟ ಮಾಡಬಾರದು. ಸರ್ಕಾರವೇ ಕಾರ್ಖಾನೆಯನ್ನು ವಹಿಸಿಕೊಂಡು ಅಗತ್ಯ ಕ್ರಮ ಕೈಗೊಂಡು ಪುನರಾರಂಭಿಸಬೇಕು ಎಂದು ಒತ್ತಾಯಿಸಿವೆ.

ಕಾರ್ಖಾನೆ ಮಾರಾಟ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸದಿದ್ದರೆ ರೈತರು ಹಾಗೂ ಕಾರ್ಮಿಕರನ್ನು ಸಂಘಟಿಸಿಕೊಂಡು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘಟನೆಗಳು ಎಚ್ಚರಿಕೆ ನೀಡಿವೆ.

ಈ ಸಂದರ್ಭದಲ್ಲಿ ಶಿವರಾಯ್ ಮುದಾಳೆ, ಶಿವರಾಜ್ ಪಾಟೀಲ್ ಅತಿವಾಳ, ಕೊಂಡಿಬಾರಾವ್ ಪಾಂಡ್ರೆ, ಬಾಬುರಾವ್ ಹೊನ್ನಾ, ನಜೀರ್ ಅಹ್ಮದ್, ಸಿದ್ದರಾಮ್, ಮಹ್ಮದ್ ನಬೀಸಾಬ್, ಧೂಳಪ್ಪ ಸೋರಳ್ಳಿ, ಮಹ್ಮದ್ ಮುನಿರೋದ್ದೀನ್, ಸಿದ್ರಾಮಪ್ಪ, ಬಸವರಾಜ್ ಅಷ್ಟೂರ್, ವೀರಶೆಟ್ಟಿ ವಟಂಬೆ, ಕಮಳಾಬಾಯಿ, ಶಾಂತಾಬಾಯಿ, ಸಾವಿತ್ರಾ, ವಿಮಲಾಬಾಯಿ ಹಾಗೂ ನರಸಪ್ಪ ಸೇರಿದಂತೆ ರೈತ ಮುಖಂಡರು ಮತ್ತು ಬಿಎಸ್‌ಎಸ್‌ಕೆ ನಿವೃತ್ತ ನೌಕರರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X