Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ನಶೆಮುಕ್ತ ಯುವಜನರಿಂದ ಸಶಕ್ತ...

Bidar | ನಶೆಮುಕ್ತ ಯುವಜನರಿಂದ ಸಶಕ್ತ ಭಾರತ ನಿರ್ಮಾಣ ಸಾಧ್ಯ : ಡಾ.ವಿದ್ಯಾ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ6 Aug 2026 6:02 PM IST
share
Bidar | ನಶೆಮುಕ್ತ ಯುವಜನರಿಂದ ಸಶಕ್ತ ಭಾರತ ನಿರ್ಮಾಣ ಸಾಧ್ಯ : ಡಾ.ವಿದ್ಯಾ ಪಾಟೀಲ್

ಬೀದರ್: ಯುವಜನತೆ ದುಷ್ಚಟ, ದುರ್ಗುಣ, ದುರಾಚಾರ, ದುರ್ಬುದ್ಧಿ, ದುರಹಂಕಾರ ಹಾಗೂ ದುರ್ವರ್ತನೆಗಳಿಂದ ದೂರ ಉಳಿದರೆ ದೇಶ ನಶೆಮುಕ್ತ ಹಾಗೂ ಸಶಕ್ತ ಭಾರತವಾಗಿ ರೂಪುಗೊಳ್ಳಲಿದೆ ಎಂದು ನೌಬಾದ್ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ವಿದ್ಯಾ ಪಾಟೀಲ್ ಹೇಳಿದರು.

ನಗರದ ಜನವಾಡ ರಸ್ತೆಯಲ್ಲಿರುವ ಪ್ರಜಾಪಿತಾ ಬ್ರಹ್ಮಾಕುಮಾರಿಸ್ ಈಶ್ವರಿಯ ವಿಶ್ವವಿದ್ಯಾಲಯ ರಾಜಯೋಗ ಕೇಂದ್ರ ಪಾವನಧಾಮದಲ್ಲಿ ಗುರುವಾರ ನಶೆಮುಕ್ತ ಭಾರತ ಅಭಿಯಾನದಡಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕಾಗಿ ಹಮ್ಮಿಕೊಂಡಿದ್ದ ಪ್ರತಿಜ್ಞಾವಿಧಿ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಒಳ್ಳೆಯ ಪ್ರಜಾಪ್ರಭುತ್ವದಲ್ಲಿ ನಾಯಕರನ್ನು ಪ್ರಶ್ನಿಸುವುದು ಅಗತ್ಯವಾದರೂ, ಇತ್ತೀಚಿನ ಪ್ರತಿಭಟನೆಗಳಲ್ಲಿ ಕೆಲ ಯುವಕರು ಬಳಸುತ್ತಿರುವ ಭಾಷೆ ಮತ್ತು ವರ್ತನೆ ಪೋಷಕರು ಹಾಗೂ ಶಿಕ್ಷಕರಲ್ಲಿ ಆತ್ಮಾವಲೋಕನಕ್ಕೆ ಕಾರಣವಾಗಿದೆ. ಮಕ್ಕಳಿಗೆ ಸರಿಯಾದ ಸಂಸ್ಕಾರ ನೀಡುವ ಜವಾಬ್ದಾರಿ ಹಿರಿಯರು ಮತ್ತು ಶಿಕ್ಷಕರ ಮೇಲಿದೆ. ಇಂದಿನ ಪರಿಸ್ಥಿತಿಯಲ್ಲಿ ಕಠಿಣ ಶಿಕ್ಷೆಗಿಂತ ಮಕ್ಕಳೊಂದಿಗೆ ಸ್ನೇಹಭಾವದಿಂದ ಬೆರೆತು, ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳುವ ವಾತಾವರಣ ನಿರ್ಮಿಸುವುದು ಮುಖ್ಯ ಎಂದು ಅವರು ತಿಳಿಸಿದರು.

ಹಿಂದೆ ಧೂಮಪಾನ ಮತ್ತು ಮದ್ಯಪಾನವನ್ನಷ್ಟೇ ವ್ಯಸನ ಎಂದು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಡ್ರಗ್ಸ್‌ಗಳ ಜೊತೆಗೆ ಮೊಬೈಲ್ ಫೋನ್ ಕೂಡ ದೊಡ್ಡ ವ್ಯಸನವಾಗಿ ಯುವಜನತೆಯನ್ನು ಕಾಡುತ್ತಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

ಬ್ರಹ್ಮಾಕುಮಾರಿಸ್ ಕೇಂದ್ರ ಪಾವನಧಾಮದ ಸಂಚಾಲಕಿ ಬಿ.ಕೆ. ಪ್ರತಿಮಾ ಬಹೆನ್‌ಜಿ ಮಾತನಾಡಿ, ಇಂದಿನ ಒತ್ತಡದ ಜೀವನದಲ್ಲಿ ನೆಮ್ಮದಿಗಾಗಿ ಅನೇಕರು ವಿವಿಧ ರೀತಿಯ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ವ್ಯಸನವು ಕ್ಷಣಿಕವಾಗಿ ದುಃಖವನ್ನು ಮರೆಸಿದರೂ, ಅಂತಿಮವಾಗಿ ವ್ಯಕ್ತಿ, ಕುಟುಂಬ, ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯನ್ನು ಹಾಳುಮಾಡುತ್ತದೆ. ಕಷ್ಟಪಟ್ಟು ಸಂಪಾದಿಸಿದ ಹಣ ಆಸ್ಪತ್ರೆಗಳ ಪಾಲಾಗುವುದರ ಜೊತೆಗೆ ಸಮಾಜದಲ್ಲಿನ ಗೌರವಕ್ಕೂ ಧಕ್ಕೆ ಉಂಟಾಗುತ್ತದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ನೌಬಾದ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಪ್ರೊ. ಮನೋಜಕುಮಾರ್, ಕೇಂದ್ರದ ಹಿರಿಯ ರಾಜಯೋಗ ಶಿಕ್ಷಕಿ ಬಿ.ಕೆ ಗುರುದೇವಿ ಸೇರಿದಂತೆ ಕೇಂದ್ರದ ಸಹೋದರ, ಸಹೋದರಿಯರು ಉಪಸ್ಥಿತರಿದ್ದರು.

Tags

Bidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X