ಬೀದರ್ : ಕಾರು, ಗೂಡ್ಸ್ ವಾಹನ ಢಿಕ್ಕಿ; ಮೂವರು ಮೃತ್ಯು

ಬೀದರ್ : ಕಾರು ಮತ್ತು ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿಯೇ ಮೂವರು ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾಲ್ಕಿ ತಾಲೂಕಿನ ನೀಲಂನಳ್ಳಿ ತಾಂಡಾದ ಹತ್ತಿರ ಇಂದು ಬೆಳಿಗ್ಗೆ ನಡೆದಿದೆ.
ಮೃತಪಟ್ಟ ಮೂವರು ತೆಲಂಗಾಣದ ನಾರಾಯಣಖೇಡ್ ಮೂಲದವರು ಎಂದು ಹೇಳಲಾಗುತ್ತಿದ್ದು, ನಿಖರವಾದ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.
ಕಾರು ಬೀದರ್ ಕಡೆಯಿಂದ ಹುಮನಾಬಾದ ಕಡೆಗೆ ಹೋಗುತಿತ್ತು. ಎದುರಿನಿಂದ ಬಂದ ಗೂಡ್ಸ್ ವಾಹನ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಬ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅವರ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಧನ್ನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





