Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ವಾರದೊಳಗೆ ಹೊಸ ಕೊಳವೆ ಬಾವಿ...

Bidar | ವಾರದೊಳಗೆ ಹೊಸ ಕೊಳವೆ ಬಾವಿ ಕೊರೆಸಿ ನೀರಿನ ಸಮಸ್ಯೆ ಬಗೆಹರಿಸಲು ಸಿಇಒ ಸೂಚನೆ

ಬೀರಿ (ಕೆ), ನಿಟ್ಟೂರು ಗ್ರಾಮಗಳಲ್ಲಿ ಸಿಇಒ ಬಿರುಸಿನ ಸಂಚಾರ

ವಾರ್ತಾಭಾರತಿವಾರ್ತಾಭಾರತಿ3 Oct 2026 5:08 PM IST
share
Bidar | ವಾರದೊಳಗೆ ಹೊಸ ಕೊಳವೆ ಬಾವಿ ಕೊರೆಸಿ ನೀರಿನ ಸಮಸ್ಯೆ ಬಗೆಹರಿಸಲು ಸಿಇಒ ಸೂಚನೆ

ಬೀದರ್: ಭಾಲ್ಕಿ ತಾಲೂಕಿನ ಬೀರಿ (ಕೆ) ಗ್ರಾಮದಲ್ಲಿ ಅಗತ್ಯವಿರುವ ಕಡೆ ವಾರದೊಳಗೆ ಹೊಸ ಕೊಳವೆ ಬಾವಿಗಳನ್ನು ಕೊರೆಸಿ ಗ್ರಾಮದ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲರಾವ್ ಅಧಿಕಾರಿಗಳಿಗೆ ಸೂಚಿಸಿದರು.

‘ಬೆಳಗ್ಗೆಯ ನಡೆ–ಹಳ್ಳಿ ಕಡೆ’ ಅಭಿಯಾನದ ಅಂಗವಾಗಿ ಶನಿವಾರ ಭಾಲ್ಕಿ ತಾಲೂಕಿನ ಬಿರಿ (ಕೆ) ಗ್ರಾಮದಲ್ಲಿ ಗ್ರಾಮ ಸಂಚಾರ ಕೈಗೊಂಡ ಅವರು, ಗ್ರಾಮದ ಪ್ರತಿಯೊಂದು ಓಣಿಯಲ್ಲಿ ಸಂಚರಿಸಿ ಕುಡಿಯುವ ನೀರು ಹಾಗೂ ದೈನಂದಿನ ಗೃಹ ಬಳಕೆಗೆ ಅಗತ್ಯವಿರುವ ನೀರಿನ ಸಮಸ್ಯೆಯನ್ನು ಪರಿಶೀಲಿಸಿದರು.

ಬಳಿಕ ಗ್ರಾಮದ ದೇವಸ್ಥಾನದ ಆವರಣದಲ್ಲಿ ಕುಂದುಕೊರತೆ ಸಭೆ ಆಯೋಜಿಸಿ ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಮಾತನಾಡಿದ ಅವರು, ತುರ್ತು ಕ್ರಿಯಾ ಯೋಜನೆ ಸಿದ್ಧಪಡಿಸಿ ಹೊಸ ಕೊಳವೆ ಬಾವಿಗಳನ್ನು ಕೊರೆಸಿ ಶಾಶ್ವತವಾಗಿ ನೀರಿನ ಸಮಸ್ಯೆ ಬಗೆಹರಿಸುವವರೆಗೆ ಮೂರು ಟ್ಯಾಂಕರ್‌ಗಳ ಮೂಲಕ ಪ್ರತಿದಿನ ಪ್ರತಿ ಟ್ಯಾಂಕರ್ ಆರು ಟ್ರಿಪ್ ನೀರು ಪೂರೈಕೆ ಮಾಡಬೇಕು. ಸಾರ್ವಜನಿಕರಿಗೆ ನೀರಿನ ಸಂಕಷ್ಟ ಎದುರಾಗದಂತೆ ನೋಡಿಕೊಳ್ಳಬೇಕು ಎಂದು ಸಭೆಯಲ್ಲಿದ್ದ ನೀರು ಸರಬರಾಜು ಇಲಾಖೆಯ ಜೆಇ ಹಾಗೂ ಗ್ರಾಪಂ ಪಿಡಿಒಗೆ ಸೂಚಿಸಿದರು.

ವಿಬಿ–ಜಿ ರಾಮ್ ಜಿ ಯೋಜನೆಯಡಿ ಕೃಷಿಕರು ಹಾಗೂ ಕೂಲಿಕಾರರಿಗೆ ವೈಯಕ್ತಿಕ ಮತ್ತು ಸಮುದಾಯ ಕಾಮಗಾರಿಗಳನ್ನು ನೀಡಬೇಕು. ಗ್ರಾಮದಲ್ಲಿ ಸರ್ಕಾರಿ ಜಮೀನು ಲಭ್ಯವಿದ್ದು, ಗ್ರಾಮ ವನ ನಿರ್ಮಿಸಲು ಯೋಜನೆ ರೂಪಿಸಿಕೊಳ್ಳಬೇಕು ಎಂದು ಪಿಡಿಒಗೆ ನಿರ್ದೇಶಿಸಿದರು. ಮುರಾಳ್ ಹಾಗೂ ಕೇರೂರು ಗ್ರಾಮದ ಪ್ರಮುಖರು ಸಭೆಯಲ್ಲಿ ಉಪಸ್ಥಿತರಿದ್ದರು.

ಬಳಿಕ ನಿಟ್ಟೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಆರೋಗ್ಯ ಸಿಬ್ಬಂದಿ ಕರ್ತವ್ಯದ ಅವಧಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಆಸ್ಪತ್ರೆಯಲ್ಲಿ ಅಗತ್ಯ ಲಸಿಕೆಗಳು ಹಾಗೂ ಔಷಧಿಗಳ ಕೊರತೆ ಇರಬಾರದು. ಔಷಧಿಗಳ ದಾಸ್ತಾನು ಮುಗಿದ ತಕ್ಷಣ ಸರ್ಕಾರಿ ನಿಯಮಾವಳಿ ಹಾಗೂ ಪ್ರಕ್ರಿಯೆಯಂತೆ ಖರೀದಿ ಮಾಡಬೇಕು. ಗ್ರಾಮಸ್ಥರು ನೀಡುತ್ತಿರುವ ದೂರುಗಳ ಪ್ರಕಾರ ಔಷಧಿಗಳ ಕೊರತೆಯ ನೆಪವೊಡ್ಡಿ ಹೊರರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ರೆಫರ್ ಮಾಡುತ್ತಿರುವುದನ್ನು ಸಹಿಸುವುದಿಲ್ಲ. ಕರ್ತವ್ಯದಲ್ಲಿ ನಿಷ್ಕಾಳಜಿ ತೋರುವ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು ಯಾವುದೇ ಮುಲಾಜಿಲ್ಲದೆ ಅಮಾನತುಗೊಳಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ನಿಟ್ಟೂರು ಗ್ರಾಮಕ್ಕೆ ಹೊಂದಿಕೊಂಡು ಹರಿಯುವ ಮಾಂಜ್ರಾ ನದಿಗೆ ಗ್ರಾಮದ ಶೌಚದ ನೀರು, ಬಚ್ಚಲು ನೀರು ಹಾಗೂ ಚರಂಡಿ ನೀರು ಸೇರದಂತೆ ಗ್ರಾಮಸ್ಥರು ಎಚ್ಚರ ವಹಿಸಬೇಕು. ನದಿಯ ಸ್ವಚ್ಛತೆ ಹಾಗೂ ಪಾವಿತ್ರ್ಯ ಕಾಪಾಡುವುದು ಗ್ರಾಮ ಪಂಚಾಯಿತಿಯ ಜೊತೆಗೆ ಸಾರ್ವಜನಿಕರ ಜವಾಬ್ದಾರಿಯೂ ಆಗಿದೆ ಎಂದು ಸಲಹೆ ನೀಡಿದರು.

ನಂತರ ನಿಟ್ಟೂರು ಗ್ರಾಮದಲ್ಲಿ ವಿಬಿ–ಜಿ ರಾಮ್ ಜಿ ಯೋಜನೆಯಡಿ ನಡೆಯುತ್ತಿದ್ದ ಸಮುದಾಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಭಾಲ್ಕಿ ತಾಪಂ ಇಒ ಬೀರೆಂದ್ರಸಿಂಗ್ ಠಾಕೂರ್, ಸಿಡಿಪಿಒ, ನೀರು ಸರಬರಾಜು ಇಲಾಖೆಯ ಜೆಇ, ತಾಪಂ ಸಹಾಯಕ ನಿರ್ದೇಶಕರು ಬಾಲಾಜಿ ಕೋಟೆ, ಬಿರಿ (ಕೆ) ಗ್ರಾಪಂ ಪಿಡಿಒ ಡಾ.ಗೀತಾ, ತಾಂತ್ರಿಕ ಸಂಯೋಜಕ ಅಮರನಾಥ್ ಪಾಟೀಲ್, ಐಇಸಿ ಸಂಯೋಜಕ ಗಣಪತಿ ಹರಕೂಡೆ, ಟಿಎಇ ಆನಂದ್‌ ಸಾಗರ್‌ ಹಾಗೂ ಮುಕೇಶ್ ಪಾಟೀಲ್ ಸೇರಿದಂತೆ ಇತರರು ಇದ್ದರು.

Tags

waterBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X