ಬೀದರ್ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ವರ್ಗಾವಣೆ

ಮುಕುಲ್ ಜೈನ್
ಬೀದರ್: ಬೀದರ್ ಮಹಾನಗರ ಪಾಲಿಕೆ ಆಯುಕ್ತರಾಗಿದ್ದ ಮುಕುಲ್ ಜೈನ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿ ಗದಗ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಗೆ ನೇಮಕ ಮಾಡಿ ಆದೇಶ ಹೊರಡಿಸಿದೆ.
ಬೀದರ್ ನಗರ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದ ಬಳಿಕ ಮೊದಲ ಆಯುಕ್ತರಾಗಿ ಮುಕುಲ್ ಜೈನ್ ಅಧಿಕಾರ ವಹಿಸಿಕೊಂಡಿದ್ದರು. ಅವರ ಸೇವಾ ಅವಧಿಯಲ್ಲಿ ಮಹಾನಗರ ಪಾಲಿಕೆಯ ಆಡಳಿತಾತ್ಮಕ ಕಾರ್ಯಗಳನ್ನು ಮುನ್ನಡೆಸಿದ್ದರು.
ಮುಕುಲ್ ಜೈನ್ ಈ ಹಿಂದೆ ಬಸವಕಲ್ಯಾಣ ತಾಲೂಕಿನ ಸಹಾಯಕ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು. ಇದೀಗ ಸರ್ಕಾರದ ವರ್ಗಾವಣೆ ಆದೇಶದಂತೆ ಗದಗ ಜಿಲ್ಲಾ ಪಂಚಾಯಿತಿಯ ಸಿಇಒ ಆಗಿ ಹೊಸ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.
Next Story




