ಬೀದರ್ | ಜಿಲ್ಲೆಯಲ್ಲಿ ನಿರಂತರ ಮಳೆ : ಸಾರ್ವಜನಿಕರು ಎಚ್ಚರದಿಂದಿರಲು ಸಚಿವ ಈಶ್ವರ್ ಖಂಡ್ರೆ ಮನವಿ

ಸಚಿವ ಈಶ್ವರ್ ಖಂಡ್ರೆ
ಬೀದರ್ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕರು ನದಿ, ಹಳ್ಳ, ಕೆರೆಗಳು ದಾಟಬಾರದು. ಹಾಗೆಯೇ ಜಾನುವಾರುಗಳನ್ನು ನದಿ ದಂಡೆ ಅಥವಾ ಹಳ್ಳದ ತಟಕ್ಕೆ ಬಿಡಬಾರದು. ಮಕ್ಕಳು, ವಯೋವೃದ್ಧರ ಸುರಕ್ಷತೆಗಾಗಿ ವಿಶೇಷ ಗಮನ ಹರಿಸಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
ಈ ವಿಷಯದ ಬಗ್ಗೆ ಅಧಿಕಾರಿಗಳಿಗೂ ಕೂಡ ನಿರ್ದೇಶನ ನೀಡಿದ್ದು, ಅವರು ತಮ್ಮ ತಮ್ಮ ಪ್ರದೇಶಗಳಲ್ಲಿ ಸತತವಾಗಿ ಹಾಜರಿದ್ದು ತುರ್ತು ಪರಿಸ್ಥಿತಿಯನ್ನು ಎದುರಿಸಲು ಸಜ್ಜಾಗಿರಬೇಕು. ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.
Next Story







