ಬೀದರ್ | ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಚಾಲಕನಿಗೆ 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಬೀದರ್ : ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಚಾಲಕನಿಗೆ ಬಸವಕಲ್ಯಾಣದ ಜೆ ಎಮ್ ಎಫ್ ಸಿ ನ್ಯಾಯಾಲಯವು 10 ಸಾವಿರ ರೂ. ದಂಡ ವಿಧಿಸಿದೆ.
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ದ ಬಸವಕಲ್ಯಾಣ ನಗರ ಪೊಲೀಸ್ ಠಾಣೆಯ ವತಿಯಿಂದ (Drink & Drive) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಬಸವಕಲ್ಯಾಣದ ಜೆ ಎಮ್ ಎಫ್ ಸಿ ನ್ಯಾಯಾಲಯವು ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಚಾಲಕನಿಗೆ 10 ಸಾವಿರ ರೂ. ದಂಡ ವಿಧಿಸಿದೆ ಎಂದು ತಿಳಿದು ಬಂದಿದೆ.
ಜಿಲ್ಲೆಯಲ್ಲಿ ರಸ್ತೆ ಅಪಘಾತ ಮತ್ತು ಅಪಘಾತದಲ್ಲಿ ಅಮಾಯಕರ ಪ್ರಾಣ ಹಾನಿ ತಡೆಗಟ್ಟುವ ನಿಟ್ಟಿನಲ್ಲಿ ಮದ್ಯ ಸೇವನೆ ಮಾಡಿ ವಾಹನ ಚಲಾವಣೆ ಮಾಡುತ್ತಿರುವವರ ವಿರುದ್ದ ಜಿಲ್ಲಾ ಪೊಲೀಸರಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ.
Next Story





