ಬೀದರ್ | ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಮೂವರಿಗೆ ದಂಡ ವಿಧಿಸಿದ ನ್ಯಾಯಾಲಯ

ಸಾಂದರ್ಭಿಕ ಚಿತ್ರ
ಬೀದರ್ : ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಮೂವರು ಚಾಲಕರಿಗೆ ಬಸವಕಲ್ಯಾಣದ ಜೆ.ಎಮ್.ಎಫ್.ಸಿ ನ್ಯಾಯಾಲಯವು ದಂಡ ವಿಧಿಸಿ ಆದೇಶ ಹೊರಡಿಸಿದೆ.
ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ತಲಾ 10,000 ರೂ. ಹಾಗೂ ಇನ್ನೊಬ್ಬರಿಗೆ 13,500 ರೂ. ಹೀಗೆ ಒಟ್ಟು 33,500 ರೂ. ದಂಡ ವಿಧಿಸಿದೆ.
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಮೂವರ ವಿರುದ್ಧ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್ಐ ಸಿದ್ದೇಶ್ವರ್ ಅವರು ಪ್ರಕರಣ ದಾಖಲಿಸಿಕೊಂಡು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಲಯವು ಇದೀಗ ದಂಡ ವಿಧಿಸಿ ಆದೇಶಿಸಿದೆ.
ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ. ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ. ತಪ್ಪದೇ ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ. ಜನ ಸಾಮಾನ್ಯರ ಪ್ರಾಣ ರಕ್ಷಣೆಯೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರು ತಿಳಿಸಿದ್ದಾರೆ.
Next Story





