ಬೀದರ್ | ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಮೂವರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿದ ನ್ಯಾಯಾಲಯ

ಬೀದರ್ : ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಚಾಲಕರಿಗೆ ಬಸವಕಲ್ಯಾಣದ ಜೆ ಎಮ್ ಎಫ್ ಸಿ ನ್ಯಾಯಾಲಯವು 10 ಸಾವಿರ ರೂ. ದಂಡ ವಿಧಿಸಿದೆ.
ಮದ್ಯ ಸೇವನೆ ಮಾಡಿ ವಾಹನ ಚಲಾಯಿಸುವವರ ವಿರುದ್ದ (Drink & Drive) ಅಡಿಯಲ್ಲಿ ಬಸವಕಲ್ಯಾಣ ನಗರ ಪೊಲೀಸ್ ಠಾಣೆ ಒಂದು ಹಾಗೂ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದ್ದು, ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಲಾಗಿತ್ತು. ಬಸವಕಲ್ಯಾಣದ ಸಿವಿಲ್ ನ್ಯಾಯಾಧಿಶರು ಮತ್ತು ಜೆ ಎಮ್ ಎಫ್ ಸಿ ನ್ಯಾಯಾಲಯವು ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದ ಚಾಲಕರಿಗೆ ತಲಾ 10 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.
ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ. ಹೆಲ್ಮೆಟ್ ಧರಿಸಿ ಜೀವ ಕಾಪಾಡಿಕೊಳ್ಳಿ. ತಪ್ಪದೆ ರಸ್ತೆ ಸುರಕ್ಷಾ ನಿಯಮಗಳು ಪಾಲಿಸಿ ಎಂದು ಎಸ್ಪಿ ಪ್ರದೀಪ್ ಗುಂಟಿ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.
Next Story





