Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಎಸ್‌ಐಆರ್ ಕುರಿತು ಮತದಾರರಲ್ಲಿ...

Bidar | ಎಸ್‌ಐಆರ್ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ: ಅಧಿಕಾರಿಗಳಿಗೆ ಡಾ.ಪಿ.ಎಸ್.ವಸ್ತ್ರದ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 July 2026 6:08 PM IST
share
Bidar | ಎಸ್‌ಐಆರ್ ಕುರಿತು ಮತದಾರರಲ್ಲಿ ಜಾಗೃತಿ ಮೂಡಿಸಿ: ಅಧಿಕಾರಿಗಳಿಗೆ ಡಾ.ಪಿ.ಎಸ್.ವಸ್ತ್ರದ್ ಸೂಚನೆ

ಬೀದರ್: ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿ ಎಸ್‌ಐಆರ್ ಅರ್ಜಿ ಭರ್ತಿ ಕುರಿತು ಮತದಾರರಲ್ಲಿ ವ್ಯಾಪಕ ಅರಿವು ಮೂಡಿಸಬೇಕು ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಡಾ.ಪಿ.ಎಸ್.ವಸ್ತ್ರದ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ನಡೆದ ಸ್ವೀಪ್ ಅರಿವು ಕಾರ್ಯಕ್ರಮ ಹಾಗೂ ಎಸ್‌ಐಆರ್ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಶೇ.66ರಷ್ಟು ಎಸ್‌ಐಆರ್ ಡಿಜಿಟೈಸೇಶನ್ ಪೂರ್ಣಗೊಂಡಿದ್ದು, ಉಳಿದ ಶೇ.34ರಷ್ಟು ಪ್ರಗತಿಯನ್ನು 3ರಿಂದ 4 ದಿನಗಳಲ್ಲಿ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಬಿಎಲ್‌ಒಗಳು ಹಾಗೂ ಮೇಲ್ವಿಚಾರಕರಿಗೆ ಅನುಕೂಲವಾಗುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರ್ಜಿಗಳನ್ನು ಭರ್ತಿ ಮಾಡಿಸಿ ಹಿಂದಿರುಗಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಎಲ್ಲ ಕಾಲೇಜುಗಳಲ್ಲಿ ಎಲೆಕ್ಟೋರಲ್ ಲಿಟರಸಿ ಕ್ಲಬ್‌ಗಳನ್ನು (ELC) ಸ್ಥಾಪಿಸಲಾಗಿದ್ದು, ಎಲ್ಲ ಶಿಕ್ಷಣ ಸಂಸ್ಥೆಗಳು ಇದರಲ್ಲಿ ನೋಂದಾಯಿಸಿಕೊಳ್ಳಬೇಕು. ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಜಾಗೃತಿ ಮೂಡಿಸಬೇಕು. ದೈಹಿಕ ಅಂಗವಿಕಲರು, ತೃತೀಯಲಿಂಗಿಗಳು ಹಾಗೂ ವೃದ್ಧಾಶ್ರಮಗಳಲ್ಲಿರುವವರಿಗೂ ಎಸ್‌ಐಆರ್ ಪ್ರಕ್ರಿಯೆ ತಲುಪುವಂತೆ ಕ್ರಮವಹಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಮಾತನಾಡಿ, ಸ್ವೀಪ್ ಕಾರ್ಯಕ್ರಮದಡಿ ವಿವಿಧ ತರಬೇತಿಗಳನ್ನು ಆಯೋಜಿಸಲಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್, ಅಪರ ಜಿಲ್ಲಾಧಿಕಾರಿ ಶಿವಾನಂದ್ ಕರಾಳೆ, ಜಿಲ್ಲಾ ಪಂಚಾಯತ್ ಕಾರ್ಯದರ್ಶಿ ಶರಣಬಸಪ್ಪ ಕೊಟೆಪ್ಪಗೋಳ್, ಸ್ವೀಪ್ ಮಾಸ್ಟರ್ ಟ್ರೇನರ್ ಡಾ. ಗೌತಮ್ ಅರಳಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಸ್ವೀಪ್ ಅರಿವು ಕಾರ್ಯಕ್ರಮ ಹಿನ್ನೆಲೆಯಲ್ಲಿ ಸಹಿ ಆಂದೋಲನದಲ್ಲಿ ಎಲ್ಲರೂ ಸಹಿ ಮಾಡಿದರು.

Tags

SIRBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X