ಬೀದರ್ | ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆ

ಬೀದರ್ : ಭಾಲ್ಕಿ ತಾಲೂಕಿನ ಧನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ವ್ಯಾಪ್ತಿಯ ನೀಲಂನಳ್ಳಿ ತಾಂಡಾದ ಹತ್ತಿರ ಇಂದು ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಗಂಭೀರವಾಗಿ ಗಾಯಗೊಂಡು ಬೀದರ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಕಾಶಿನಾಥ್ ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ತೆಲಂಗಾಣದ ನಾರಾಯಣಖೇಡ್ ಮೂಲದ ರಾಚಪ್ಪ, ನವೀನ್ ಹಾಗೂ ನಾಗರಾಜ್ ಎಂಬವವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪ್ರತಾಪ್ ಎಂಬವರ ಸ್ಥಿತಿಯೂ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಗಾಣಗಾಪುರದ ದೇವಸ್ಥಾನಕ್ಕೆ ಹೋಗಿ ಇಂದು ಬೆಳಗ್ಗೆ ಹುಮನಾಬಾದ ಮಾರ್ಗವಾಗಿ ತೆಲಂಗಾಣದ ನಾರಾಯಣ ಖೇಡ್ ಕಡೆಗೆ ಪಯಣ ಮಾಡುತಿದ್ದರು. ಮಾರ್ಗಮಧ್ಯ ಇವರು ಸಂಚರಿಸುತ್ತಿದ್ದ ಕಾರು ಮತ್ತು ಗೂಡ್ಸ್ ವಾಹನ ಢಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದರು.
ಘಟನಾ ಸ್ಥಳಕ್ಕೆ ಧನ್ನೂರು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







