Bidar | ಜಿಂಕೆ ಬೇಟೆ; ಮೂವರು ಆರೋಪಿಗಳ ಬಂಧನ

ಬೀದರ್: ಜಿಂಕೆಯನ್ನು ಬೇಟೆಯಾಡಿ ಕೊಂದ ಆರೋಪದ ಮೇಲೆ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸೋಮವಾರ ಚೊಂಡಿ ಗ್ರಾಮದ ಸಮೀಪ ಬಂಧಿಸಿದ್ದಾರೆ.
ಬಂಧಿತರಲ್ಲಿ ತೆಲಂಗಾಣ ಮೂಲದ ಇಬ್ಬರು ಹಾಗೂ ಕಲಬುರಗಿ ಜಿಲ್ಲೆಯ ಚಿಂಚೋಳಿ ಮೂಲದ ಒಬ್ಬ ವ್ಯಕ್ತಿ ಇದ್ದಾನೆ ಎಂದು ತಿಳಿದುಬಂದಿದೆ.
ಬೀದರ್ ತಾಲೂಕಿನ ಚೊಂಡಿ ಗ್ರಾಮದ ಸುತ್ತಮುತ್ತ ಬೇಟೆಯಾಡುತ್ತಿದ್ದ ಆರೋಪಿಗಳು ಜಿಂಕೆಯೊಂದನ್ನು ಬೇಟೆಯಾಡಿ ಕೊಂದಿದ್ದಾರೆ ಎನ್ನಲಾಗಿದೆ. ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣ ಸ್ಥಳಕ್ಕೆ ತೆರಳಿದ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಮೂವರನ್ನು ಬಂಧಿಸಿದ್ದಾರೆ.
ಬೇಟೆಯಾಡಲಾಗಿದ್ದ ಒಂದು ಜಿಂಕೆ ಮಾತ್ರ ಪತ್ತೆಯಾಗಿದ್ದು, ಆರೋಪಿಗಳು ಇನ್ನಷ್ಟು ಜಿಂಕೆಗಳನ್ನು ಬೇಟೆಯಾಡಿದ್ದಾರೆಯೇ ಎಂಬ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಜನವಾಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತನಿಖೆ ಮುಂದುವರಿದಿದೆ.
Next Story




