Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೀದರ್
  4. Bidar | ಬೆಂಗಳೂರು-ಮುಂಬೈ ವಂದೇ ಭಾರತ್...

Bidar | ಬೆಂಗಳೂರು-ಮುಂಬೈ ವಂದೇ ಭಾರತ್ ರೈಲು ಮಾರ್ಗ ಬದಲಿಸದಂತೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ15 July 2026 6:22 PM IST
share
Bidar | ಬೆಂಗಳೂರು-ಮುಂಬೈ ವಂದೇ ಭಾರತ್ ರೈಲು ಮಾರ್ಗ ಬದಲಿಸದಂತೆ ಒತ್ತಾಯ
ಸಂಸದ ಜಗದೀಶ್‌ ಶೆಟ್ಟರ್‌ ನಡೆಗೆ ತೀವ್ರ ಖಂಡನೆ

ಬೀದರ್ : ಬೆಂಗಳೂರು–ಮುಂಬೈ ನಡುವಿನ ವಂದೇ ಭಾರತ್ ಸ್ಲೀಪರ್ ರೈಲನ್ನು ಕಲಬುರಗಿ ಮಾರ್ಗವಾಗಿ ಸಂಚರಿಸುವುದಾಗಿ ಕೇಂದ್ರ ಸರ್ಕಾರ ಘೋಷಿಸಿದ್ದರೂ, ಇದೀಗ ಅದನ್ನು ಹುಬ್ಬಳ್ಳಿ–ಬೆಳಗಾವಿ ಮಾರ್ಗಕ್ಕೆ ಬದಲಾಯಿಸುವ ಪ್ರಯತ್ನ ನಡೆಯುತ್ತಿರುವುದು ಖಂಡನೀಯ ಎಂದು ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯ ಹಾಗೂ ಟೀಮ್ ಯುವ ಸಂಘಟನೆಯ ಸಂಚಾಲಕ ವಿನಯಕುಮಾರ್ ಮಾಳಗೆ ಹೇಳಿದ್ದಾರೆ.

ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿದ ಅವರು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಏಪ್ರಿಲ್ 27, 2026ರಂದು ಕಲಬುರಗಿ ಮಾರ್ಗವಾಗಿ ಬೆಂಗಳೂರು–ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಸಂಚರಿಸಲಿದೆ ಎಂದು ಅಧಿಕೃತವಾಗಿ ಘೋಷಿಸಿದ್ದರು. ಆದರೆ, ಕೆಲವೇ ತಿಂಗಳಲ್ಲಿ ಈ ಮಾರ್ಗವನ್ನು ಬದಲಾಯಿಸಲು ನಡೆಯುತ್ತಿರುವ ಪ್ರಯತ್ನ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ ವಿಷಯದಲ್ಲಿ ಬಿಜೆಪಿ ನಾಯಕರು ನಿರಂತರವಾಗಿ ನಿರ್ಲಕ್ಷ್ಯ ತೋರುತ್ತಿದ್ದಾರೆ. ಈ ಹಿಂದೆ ರಾಯಚೂರಿಗೆ ಮಂಜೂರಾಗಬೇಕಿದ್ದ ಐಐಟಿ ಹಾಗೂ ಏಮ್ಸ್ ಸಂಸ್ಥೆಗಳನ್ನು ಹುಬ್ಬಳ್ಳಿ–ಧಾರವಾಡಕ್ಕೆ ಸ್ಥಳಾಂತರಿಸಿದಂತೆ, ಈಗ ವಂದೆ ಭಾರತ್ ರೈಲು ಮಾರ್ಗವನ್ನೂ ಬದಲಾಯಿಸಲು ಯತ್ನಿಸಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೀದರ್ ಜಿಲ್ಲೆಗೆ ಬರಬೇಕಿದ್ದ ಹೆಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ, ಬಿಎಸ್‌ಎಫ್ ತರಬೇತಿ ಕೇಂದ್ರ ಹಾಗೂ ರಾಷ್ಟ್ರೀಯ ಹೂಡಿಕೆ ಮತ್ತು ಉತ್ಪಾದನಾ ವಲಯ (ಎನ್‌ಐಎಂಜೆಡ್) ಯೋಜನೆಗಳೂ ಕೈತಪ್ಪಿರುವುದನ್ನು ಅವರು ಉಲ್ಲೇಖಿಸಿದರು.

ಬೆಂಗಳೂರು–ಮುಂಬೈ ವಂದೆ ಭಾರತ್ ಸ್ಲೀಪರ್ ರೈಲು ಯಾವುದೇ ಕಾರಣಕ್ಕೂ ಕಲಬುರಗಿ ಮಾರ್ಗದಿಂದ ಬದಲಾಗಬಾರದು. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ ಕಲಬುರಗಿ ಮಾರ್ಗವನ್ನೇ ಅಂತಿಮಗೊಳಿಸುವಂತೆ ಒತ್ತಾಯಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ರೈಲು ಮಾರ್ಗ ಬದಲಿಸಿದರೆ, ಕಲ್ಯಾಣ ಕರ್ನಾಟಕದಾದ್ಯಂತ ಸಾರ್ವಜನಿಕರು, ಯುವಕರು ಹಾಗೂ ವಿವಿಧ ಸಂಘಟನೆಗಳನ್ನು ಒಗ್ಗೂಡಿಸಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

Tags

Vande Bharat trainbangaloreMumbaiBidar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X